ಮುಳ್ಳೂರು, ಜ. ೧೮: ವಿದ್ಯಾರ್ಥಿ ಗಳನ್ನು ಪ್ರೋತ್ಸಾಹಿಸಿ ಹುರಿ ದುಂಬಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ ಎಂದು ಸಮೀಪದ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಕೆ.ಪಿ. ಜಯಕುಮಾರ್ ಅಭಿಪ್ರಾಯ ಪಟ್ಟರು. ಅವರು ಶನಿವಾರಸಂತೆ ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸ ಲಾದ ಶನಿವಾರಸಂತೆ ಕ್ಲಸ್ಟರ್ಮಟ್ಟದ ೨೦೨೨-೨೩ನೇ ಸಾಲಿನ ‘ಕಲಿಕಾ ಹಬ್ಬ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಜೊತೆಯಲ್ಲಿ ಕೌಶಲ್ಯ, ಸೃಜನಶೀಲ ಮತ್ತು ಬುದ್ಧಿವಂತಿಕೆ ಎಲ್ಲವನ್ನು ಒಟ್ಟು ಗೂಡಿಸಿ ಅವುಗಳನ್ನು ಅನಾವರಣ ಗೊಳಿಸಲು ಕಲಿಕಾ ಹಬ್ಬ ಉತ್ತಮ ವೇದಿಕೆಯಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾಶೀಲ ಪ್ರತಿಭೆಗಳನ್ನು ಪ್ರದರ್ಶಿಸುವಂತೆ ಸಲಹೆ ನೀಡಿದರು.
ನಿಡ್ತ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ರೂಪ ಮಾತನಾಡಿ-ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ತರಗತಿಯಲ್ಲಿ ಕಂಠಪಾಠ ಶಿಕ್ಷಣಕಷ್ಟೆ ಮೀಸಲಾಗಬಾರದೆಂಬ ಉದ್ದೇಶ ದಿಂದ ಸರಕಾರ ವಿದ್ಯಾರ್ಥಿಗಳು ಸಂತಸ ನಲಿವಿನಿಂದ ಶೈಕ್ಷಣಿಕ ಸಾಲಿನಲ್ಲಿ ವರ್ಷಕೊಮ್ಮೆ ಸೃಜನಶೀಲ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕಲಿಕಾ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಿಂದ ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಮಟ್ಟ ಸುಧಾರಿಸುತ್ತದೆ ಎಂದರು.
ಶನಿವಾರಸAತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಕಲಿಕೆಯ ಜೊತೆಯಲ್ಲಿ ಕ್ರೀಯಾಶೀಲತೆ ಮತ್ತು ಕ್ರಿಯಾತ್ಮಕ ಕಲಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರಕಾರ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆಯು ಶೈಕ್ಷಣಿಕ ಸಾಲಿನಲ್ಲಿ ೪ನೇತರಗತಿ ಯಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದು ಈ ದಿಸೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸುವ ಮೂಲಕ ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡುವಂತೆ ಸಲಹೆ ನೀಡಿದರು.
ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯ ಕ್ರಮದಲ್ಲಿ ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಕಿರಣ್, ದಾನಿ ಮತ್ತು ಹಿರಿಯ ಮುಖಂಡ ಈಶ್ವರಪ್ಪ, ಎಸ್ಡಿಎಂಸಿ ಉಪಾಧ್ಯಕ್ಷೆ ಶಾಹಿದ್ ತಾಜ್, ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಚಿಕ್ಕ ಕೊಳತ್ತೂರು ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಉರ್ದು ಶಾಲಾ ಮುಖ್ಯ ಶಿಕ್ಷಕಿ ಸೇವಂತಿ, ದುಂಡಳ್ಳಿ ಗ್ರಂಥಪಾಲಕಿ ಎಸ್.ಪಿ. ದಿವ್ಯ, ಶನಿವಾರಸಂತೆ ಗ್ರಾ.ಪಂ. ಸದಸ್ಯೆ ಸರಸ್ವತಿ, ಶಿಕ್ಷಕಿ ತಂಗಮ್ಮ, ಎಸ್ಡಿಎಂಸಿ ಸದಸ್ಯರಾದ ಶಿವಕುಮಾರ್, ಮಧು ಮುಂತಾದವರಿದ್ದರು.
ಕಲಿಕಾ ಹಬ್ಬ ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲಾ ವಿದ್ಯಾರ್ಥಿಗಳು ಬೆಳಿಗ್ಗೆ ೧೦ ಗಂಟೆಯಿAದ ಶಾಲೆಯಿಂದ ಪಟ್ಟಣದ ಕೆಆರ್ಸಿ ವೃತ್ತದ ವರೆಗೆ ಮರೆವಣಿಗೆಯಲ್ಲಿ ತೆರಳಿದರು.