ಮುಳ್ಳೂರು, ಜ. ೧೯: ಸಮೀಪದ ಶನಿವಾರಸಂತೆ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ಕೆಲವೊಂದು ಕಾಮಗಾರಿಗಳು ಅವೈಜ್ಞಾನಿಕವಾಗಿ ನಡೆಯುತ್ತಿದ್ದ ಮಾಹಿತಿ ಹಿನ್ನೆಲೆ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಅವೈಜ್ಞಾನಿಕ ಕಾಮಗಾರಿಯನ್ನು ಸ್ಥಗಿತಗೊಳಿಸಿ ಗ್ರಾ.ಪಂ.ಯವರು ಸೂಚಿಸುವ ಸ್ಥಳದಲ್ಲಿ ಮತ್ತೆ ಕಾಮಗಾರಿಯನ್ನು ನಡೆಸುವಂತೆ ಸಂಬAಧಪಟ್ಟ ಅಧಿಕಾರಿಗೆ ತಾಕೀತು ಮಾಡಿದ್ದಾರೆ. ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆ್ಯಂಬ್ಯುಲೆನ್ಸ್ ವಾಹನ ನಿಲುಗಡೆಗಾಗಿ ಶೆಡ್ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮತ್ತು ಆಸ್ಪತ್ರೆ ಕಟ್ಟಡಕ್ಕೆ ಅಂಟಿಕೊAಡAತೆ ಅವೈಜ್ಞಾನಿಕ ಕ್ರಮದಲ್ಲಿ ಕಾಮಗಾರಿ ಮಾಡುತ್ತಿದ್ದರು. ಆಸ್ಪತ್ರೆ ಕಟ್ಟಡದ ಹಿಂಭಾಗದಲ್ಲಿರುವ ಆಕ್ಸಿಜನ್ ಘಟಕಕ್ಕೆ ವಾಹನ ಓಡಾಡಲು ಅಡಚಣೆಯಾಗುವ ರೀತಿಯಲ್ಲಿ ಕಾಮಗಾರಿಯನ್ನು ಕಾರ್ಯ ನಡೆಯುತ್ತಿತ್ತು. ಅಲ್ಲದೆ ಆಸ್ಪತ್ರೆ ಸಿಬ್ಬಂದಿ ಮತ್ತು ಮಹಿಳಾ ಸಿಬ್ಬಂದಿಗಳಿಗೆ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಸಹ ಅವೈಜ್ಞಾನಿಕವಾಗಿ ನಡೆಸಲಾಗುತ್ತಿತ್ತು. ಈ ಎಲ್ಲಾ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಬುಧವಾರ ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್, ಉಪಾಧ್ಯಕ್ಷ ಎಸ್.ಆರ್. ಮಧು, ಸದಸ್ಯರಾದ ಎಸ್.ಸಿ. ಶರತ್ಶೇಖರ್, ಸರ್ದಾರ್ ಆಹಮ್ಮದ್, ಸರೋಜ ಶೇಖರ್ ತಂಡ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಆಸ್ಪತ್ರೆ ಸಿಬ್ಬಂದಿಯಿAದ ಮಾಹಿತಿ ಪಡೆದ ತಂಡ ಕಾಮಗಾರಿ ಗುತ್ತಿಗೆದಾರ ಮತ್ತು ಸಂಬAಧ ಪಟ್ಟ ಇಂಜಿನಿಯರ್ ಅವರನ್ನು ಸಂಪರ್ಕಿಸಿದರು. ಕಾಮಗಾರಿಗೆ ಸಂಬAಧಪಟ್ಟ ಜಿ.ಪಂ. ಇಂಜಿನಿಯರ್ ಸಲೀಂ ಅವರನ್ನು ಮೊಬೈಲ್ನಲ್ಲಿ ಸಂಪರ್ಕಿಸಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ತರಾಟೆಗೆ ತೆಗೆದುಕೊಂಡರು. ಇದಕ್ಕೆ ಸ್ಪಂದಿಸಿದ ಜಿ.ಪಂ. ಇಂಜಿನಿಯರ್ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತೇವೆ ಗ್ರಾ.ಪಂ. ಸೂಚಿಸಿದ ಸ್ಥಳದಲ್ಲಿ ಮತ್ತೆ ಕಾಮಗಾರಿ ಕಾರ್ಯ ನಡೆಸಲಾಗುವುದೆಂದು ಭರವಸೆ ನೀಡಿದರು.
ಗ್ರಾ.ಪಂ. ತಂಡ ಆಸ್ಪತ್ರೆಗೆ ಸೇರಿದ ಹಳೆಯ ಶಿಥಿಲಗೊಂಡ ಕಟ್ಟಡಗಳನ್ನು ವೀಕ್ಷಿಸಿತು. ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
-ಭಾಸ್ಕರ್ ಮುಳ್ಳೂರು