ಮಡಿಕೇರಿ, ಜ. ೧೯: ನಗರದ ಮಹದೇವಪೇಟೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ೯ನೇ ವರ್ಷದ ವಾರ್ಷಿಕೋತ್ಸವ ತಾ. ೨೪ ರಂದು ಬೆಳಿಗ್ಗೆ ೭ ಗಂಟೆಗೆ ನಡೆಯಲಿದೆ. ಇದರ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ, ವಾಸವಿ ಹೋಮ, ೮ ಗಂಟೆಗೆ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨.೪೦ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.