ಸುಂಟಿಕೊಪ್ಪ, ಜ. ೧೮: ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸುಂಟಿಕೊಪ್ಪ ಗ್ರಾ.ಪಂ. ಸಹಯೋಗದೊಂದಿಗೆ ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ತಾ. ೨೦ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ಶಾಸಕ ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಡಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ ಮಹೇಶ್, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್, ಗ್ರಾ.ಪಂ. ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ.ರಂಗದಾಮಯ್ಯ, ಕೂಡಿಗೆ ಡಯಟ್ ಉಪ ನಿರ್ದೇಶಕ ಬಿ.ವಿ. ಮಲ್ಲೇಶಪ್ಪ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಹೆಚ್.ಎಸ್. ಚೇತನ್, ಕರ್ನಾಟಕ ರಾಜ್ಯ ಪ್ರೌಡಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಸುಂಟಿಕೊಪ್ಪ ನಾಡಕಚೇರಿ ಉಪ ತಹಶೀಲ್ದಾರ್ ಹೆಚ್.ಕೆ. ಶಿವಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಚ್. ವೇಣುಗೋಪಾಲ್, ಸುಂಟಿಕೊಪ್ಪ ಆರಕ್ಷಕ ಠಾಣೆ ಉಪನಿರೀಕ್ಷ ಮಂಜುನಾಥ್ ಆಗಮಿಸಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಸಿ.ಎ. ಗೀತಾ, ಪ್ರಾಂಶುಪಾಲ ಬಾಲಕೃಷ್ಣ ತಿಳಿಸಿದ್ದಾರೆ.