ವೀರಾಜಪೇಟೆ, ಜ. ೧೮: ರಾಜ್ಯ ಸÀರ್ಕಾರ ಬಿಪಿಎಲ್ ಪಡಿತರದಾರರಿಗೆ ಹೆಚ್ಚುವರಿ ಒಂದು ಕೆಜಿ ಅಕ್ಕಿ ಸೇರಿ ದಂತೆ ಆರು ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ಆದರೆ ಕೆಲವು ಖಾಸಗಿ ನ್ಯಾಯಬೆಲೆ ಅಂಗಡಿಗಳು ಇದನ್ನು ಫಲಾನುಭವಿಗಳಿಗೆ ನೀಡದೆ ವಂಚಿಸುತ್ತಿವೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಶಾಸಕ ಬೋಪಯ್ಯ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಸೂಚನೆ ನೀಡಿದರು.
ವೀರಾಜಪೇಟೆ ಮಹಿಳಾ ಸಮಾಜ ಸಭಾಂಗಣದಲ್ಲಿ ಕಂದಾಯ ಇಲಾಖೆಯಿಂದ ಆಯೋಜಿಸಿದ್ದ ಹಕ್ಕು ಪತ್ರ ಮತ್ತು ಪಿಂಚಣಿ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದುಳಿ ದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಹಲವಾರು ಜನಪರ ಯೋಜನೆ ಗಳನ್ನು ಜಾರಿಗೆ ತಂದಿದ್ದು ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು. ೨೦೦೫ಕ್ಕೂ ಮುಂಚಿತವಾಗಿ ಸರಕಾರಿ ಭೂಮಿ ಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಆ ಜಾಗವನ್ನು ಗುತ್ತಿಗೆ ನೀಡಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಒಂದು ಕೋಟಿ ೩೪ ಲಕ್ಷ ರೂಪಾಯಿ ಪರಿಹಾರವನ್ನು ೪೬ ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನು ಹೆಚ್ಚುವರಿಯಾಗಿ ಆರು ಕೋಟಿ ರೂ.ಗಳ ಅನುದಾನ ವÀನ್ನು ಒದಗಿಸಲಾಗಿದೆ ಎಂದು ಹೇಳಿದರು. ಸಭೆಯನ್ನು ಉದ್ದೇಶಿಸಿ ವೀರಾಜ ಪೇಟೆ ತಾಲೂಕು ತಹಶೀಲ್ದಾರ್ ಅರ್ಚಾನಭಟ್, ವೀರಾಜಪೇಟೆ ತಾಲೂಕು ಬಗರ್ಹುಕುಂ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ ಮಾತನಾಡಿದರು. ವೇದಿಕೆಯಲ್ಲಿ ಬಗರ್ಹುಕುಂ ಸಮಿತಿ ಸದಸ್ಯರಾದ ಮಾಪಂಗಡ ಯಮುನ ಚಂಗಪ್ಪ ಮತ್ತು ಲಾಲ ಭೀಮಯ್ಯ, ವೀರಾಜಪೇಟೆ ಕಂದಾಯ ಪರಿವೀಕ್ಷಕ ಹರೀಶ್ ಉಪಸ್ಥಿತರಿದ್ದರು. ಇದೇ ಸಂದರ್ಭ ೯೨ ಫಲಾನುಭವಿಗಳೀಗೆ ಪಿಂಚಣಿ ಸೌಲಭ್ಯ ಮತ್ತು ೯ ಫಲಾನುಭವಿಗಳಿಗೆ ಸಾಗುವಳಿ ಪತ್ರ ನೀಡಲಾಯಿತು.