ಮುಳ್ಳೂರು, ಜ. ೧೮: ಸಮಿಪದ ಬ್ಯಾಡಗೊಟ್ಟ ಗ್ರಾ.ಪಂ.ಗೆ ಸೇರಿದ ಬೆಂಬಳೂರು ಗ್ರಾಮದ ಜಾನಪದ ಪ್ರಸಿದ್ಧ ಶ್ರೀ ಬಾಣಂತಮ್ಮ ಮತ್ತು ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ಸೋಮವಾರ ಸಂಪನ್ನಗೊAಡಿತು. ಬೆಂಬಳೂರು, ಶಿವರಳ್ಳಿ ಮತ್ತು ಊರುಗುತ್ತಿ ಗ್ರಾಮಸ್ಥರ ವತಿಯಿಂದ ಸಂಕ್ರಾAತಿ ಹಬ್ಬದ ಮರುದಿನ ಬೆಂಬಳೂರು ಬಾಣಂತಮ್ಮ ಮತ್ತು ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವನ್ನು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ.
ಸೋಮವಾರ ಬೆಳಿಗ್ಗೆ ೭ ಗಂಟೆಯಿAದ ೯ ಗಂಟೆವರೆಗೆ ಬೆಂಬಳೂರು ಗ್ರಾಮದ ಶ್ರೀ ಬಾಣಂತಮ್ಮ ದೇವಸ್ಥಾನದಲ್ಲಿ ಬಾಣಂತಮ್ಮ ತಾಯಿಗೆ ಮತ್ತು ಪುತ್ರ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜಾ ವಿದಿ ವಿಧಾನ ನೆರವೇರಿಸಲಾಯಿತು. ಬಳಿಕ ಶ್ರೀ ಬಾಣಂತಮ್ಮ ಮತ್ತು ಕುಮಾರಲಿಂಗೇಶ್ವರ ಸ್ವಾಮಿ ದೇವರನ್ನು ಅಡ್ಡಪಲ್ಲಕಿಯಲ್ಲಿ ಕೂರಿಸಿ ಗ್ರಾಮದ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ನಡೆಸಲಾಯಿತು, ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಗ್ರಾಮದ ಬಾಣಂತಮ್ಮ ಜಾತ್ರಾ ಮೈದಾನದಲ್ಲಿ ತಾಯಿ ಬಾಣಂತಮ್ಮಳ ಜಾತ್ರೆಯನ್ನು ನಡೆಸಲಾಯಿತು. ಮಧ್ಯಾಹ್ನ ೨ ಗಂಟೆಯಿAದ ಸಂಜೆ ೫ರವರೆಗೆ ಕುಮಾರಲಿಂಗೇಶ್ವರ ಜಾತ್ರಾ ಮೈದಾನದಲ್ಲಿ ಪುತ್ರ ಕುಮಾರಲಿಂಗೇಶ್ವರ ಸ್ವಾಮಿಯ ಜಾತ್ರೆಯನ್ನು ನಡೆಸಲಾಯಿತು. ಬಾಣಂತಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ಹರಕೆ ಮಾಡಿಕೊಂಡಿದ್ದ ಮಹಿಳೆಯರು ಗ್ರಾಮದ ಬಾಣಂತಮ್ಮ ಕೆರೆಯಲ್ಲಿ ಬಾಗೀನ ಅರ್ಪಿಸಿದರು. ಜಾತ್ರಾ ಮಹೋತ್ಸವದಲ್ಲಿ ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ನೆರೆಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಬಂದು ಪಾಲ್ಗೊಂಡಿದ್ದರು. ಮಧ್ಯಾಹ್ನ ಜಾತ್ರಾ ಸಮಿತಿ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.