ಸೋಮವಾರಪೇಟೆ, ಜ. ೧೯: ಸೋಮವಾರಪೇಟೆ ಕಸಬಾ ಹೋಬಳಿ ವ್ಯಾಪ್ತಿಯ ಮಸಗೋಡು ಗ್ರಾಮದಲ್ಲಿ ತಾ. ೨೧ರಂದು ಪೂರ್ವಾಹ್ನ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ತಹಶಿಲ್ದಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಲೆಕ್ಕಿಗರಾದ ಶ್ವೇತಾ ತಿಳಿಸಿದ್ದಾರೆ.
ಮಸಗೋಡು ಗ್ರಾಮದ ಸಿದ್ದೇಶ್ವರ ಕನ್ವೆನ್‌ಷನ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಸಗೋಡು ಮತ್ತು ತಣ್ಣೀರುಹಳ್ಳ ಗ್ರಾಮಕ್ಕೆ ಸಂಬAಧಿಸಿದAತೆ ಕಂದಾಯ, ಸರ್ವೆ ಸೇರಿದಂತೆ ಇನ್ನಿತರ ಸರ್ಕಾರಿ ಸೇವೆಗಳ ಬಗ್ಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.