ಚೆಯ್ಯಂಡಾಣೆ, ಜ, ೧೯: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚೆಯ್ಯಂಡಾಣೆ ಕ್ಲಸ್ಟರ್ಗೆ ಒಳಪಟ್ಟ ಪ್ರಾಥಮಿಕ ಶಾಲೆಗಳ ಮಕ್ಕಳ ಕಲಿಕಾ ಹಬ್ಬಕ್ಕೆ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಚಾಲನೆ ನೀಡಿದರು.
ನಂತರ ಮಾತನಾಡಿ, ನಾನು ಕೂಡ ಸರಕಾರಿ ಶಾಲೆಯಲ್ಲೇ ವ್ಯಾಸಂಗ ಮಾಡಿದ್ದು ಆ ಸಮಯ ದಲ್ಲಿ ಇಂತಹ ಯಾವುದೇ ಕಾರ್ಯಕ್ರಮ ಇರಲಿಲ್ಲ. ಸರಕಾರ ಹಲವಾರು ಕಾರ್ಯಕ್ರಮಗಳ ಮುಖಾಂತರ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರ ನೀಡುತ್ತಿದ್ದು, ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಎಚ್.ಎಂ. ಲೋಕೇಶ್ ವಹಿಸಿದ್ದರು.
ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಸಿಆರ್ಪಿ ಉಷಾ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಯನ್ನು ಹೊರತರಲು ಇದೊಂದು ಉತ್ತಮ ಕಾರ್ಯಕ್ರಮ, ಎರಡು ವರ್ಷ ಕೊರೊನಾದಿಂದ ವಿದ್ಯಾರ್ಥಿ ಗಳಿಗೆ ಎಷ್ಟು ನಷ್ಟ ಉಂಟಾಗಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಆ ಸಮಯದಲ್ಲಿ ಕಲಿಯ ಬೇಕಾದ ಸಾಮರ್ಥ್ಯವನ್ನ ಈ ವರ್ಷ ಕಲಿಕಾ ವರ್ಷ ಎಂದು ಆಚರಿಸುತ್ತಿ ದ್ದೇವೆ, ಕಲಿಕಾ ಚೇತರಿಕೆ ಹಾಗೂ ಕಲಿಕಾ ಹಬ್ಬಕ್ಕೆ ಪೂರಕವಾದ ಸಂಬAಧವಿದೆ ಎಂದು ವಿದ್ಯಾರ್ಥಿ ಗಳಿಗೆ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಕಾರ್ಯಕ್ರಮಕ್ಕೆ ಶುಭಹಾರೈಸಿ ಮಾತನಾಡಿದರು. ಇಲಾಖೆ ವತಿಯಿಂದ ಆಗಮಿಸಿ ಮೂರ್ನಾಡು ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಮಾತನಾಡಿ, ಮಡಿಕೇರಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಕರಡದಲ್ಲಿ ಆಯೋಜಿಸಿದ್ದು ಹೆಗ್ಗಳಿಕೆ ಎಂದರು. ಒಂದು ವರ್ಷ ದಲ್ಲಿ ಕಲಿತಂತಹ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಕಲಿಕಾ ಹಬ್ಬ ಸಹಕಾರಿ ಯಾಗಲಿದೆ ಎಂದರು.
ಸಲಹಾ ಸಮಿತಿಯ ಸದಸ್ಯರು ಹಾಗೂ ಹಿರಿಯರು ಈ ಹಿಂದೆ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಬೇಪುಡಿಯಂಡ ಬಿದ್ದಪ್ಪ ಮಾತನಾಡಿ, ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಹೊಂದಿರುವವರು ಹಲವರು ಇದ್ದಾರೆ. ಸರಕಾರಿ ಶಾಲೆಗೆ ಎಲ್ಲ ರೀತಿಯ ಸೌಲಭ್ಯ ಇದ್ದರೂ ಸಹ ಖಾಸಗಿ ಶಾಲೆಯನ್ನೇ ಜನರು ಆಯ್ಕೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿ ಈ ಕಾರ್ಯಕ್ರಮ ದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಸಂತೋಷ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿಲಿನ್ ಬೇಪುಡಿಯಂಡ, ನೇತ್ರಾವತಿ, ಸುಧಾ ಸುಬ್ರಮಣಿ ಹಾಗೂ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಮುಖ್ಯ ಶಿಕ್ಷಕರು, ಪೋಷಕರು, ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆ ಯರು, ಡಿಜಿಟಲ್ ಗ್ರಂಥಾಲಯದ ಮೇಲ್ವಿಚಾರಕರು, ಪ್ರಮುಖರಾದ ಬಬಿತ, ಮರಿಯಂಬಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆ ಯನ್ನು ಚೆಯ್ಯಂಡಾಣೆಯ ಶಿಕ್ಷಕಿ ಜಯಪ್ರದಾ ಮಾಡಿದರೆ, ಸ್ವಾಗತವನ್ನು ಕರಡ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ ಹಾಗೂ ವಂದನೆಯನ್ನು ಶಿಕ್ಷಕಿ ದಮಯಂತಿ ನೆರವೇರಿಸಿದರು.