ಮಡಿಕೇರಿ, ಜ. ೧೯: ಸಂಪಾಜೆಯ ಚೆಡಾವು ಆದರ್ಶ ಫ್ರೆಂಡ್ಸ್, ಶ್ರೀ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಮತ್ತು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಬಾಲಚಂದ್ರ ಕಳಗಿ ಸ್ಮರಣಾರ್ಥ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ತಾ.೨೧ರಂದು ಸಂಪಾಜೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಆದರ್ಶ ಫ್ರೆಂಡ್ಸ್ ಚೆಡಾವು ಅಧ್ಯಕ್ಷ ಉದಯಕುಮಾರ್ ಹನಿಯಡ್ಕ ವಹಿಸಲಿದ್ದು, ಶಾಸಕ ಕೆ.ಜಿ ಬೋಪಯ್ಯ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್, ಉಪಾಧ್ಯಕ್ಷರು, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಉತ್ತಪ್ಪ ಹೊಸೂಕ್ಲು, ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ, ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಸಿ. ಅನಂತ್, ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ನಿರ್ಮಲಾ ಭರತ್, ದಿ. ಬಾಲಚಂದ್ರ ಕಳಗಿ ಅವರ ಪತ್ನಿ ರಮಾದೇವಿ ಕಳಗಿ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.