ಮಡಿಕೇರಿ, ಜ. ೨೦: ಆಧುನಿಕ ಯುಗದಲ್ಲಿ ಮೊಬೈಲ್, ಟಿವಿ ಜೊತೆಗೆ ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಸಂಸ್ಕೃತಿಗಳು ಇವುಗಳನ್ನು ಮರೆಯಾಗುತ್ತಿದ್ದು, ಉಳಿಸಿ ಬೆಳೆಸುವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‌ಮನೆ ಕೆಫೆ ಸಹಕಾರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ ಬುಡಕಟ್ಟು ನೃತ್ಯ ಸ್ಪರ್ಧೆ ಕಾರ್ಯಕ್ರಮಕ್ಕೆ ‘ದುಡಿ’ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನದಲ್ಲಿ ಮೊಬೈಲ್ ಇಲ್ಲದೆ ಬದುಕುವುದು ಕಷ್ಟಸಾಧ್ಯ ಎಂಬAತಾಗಿದೆ. ಅಗತ್ಯಕ್ಕೆ ತಕ್ಕಂತೆ ಮೊಬೈಲ್ ಬಳಸಬೇಕು. ಹಿಂದಿನ ಕಲೆ, ಜಾನಪದ ಸಂಸ್ಕೃತಿಗೂ ಒತ್ತು ನೀಡುವಂತಾಗಬೇಕು.

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬದುಕು ವಂತಾಗಬೇಕು. ವಿದ್ಯೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತಾಗಬೇಕು. ವೃತ್ತಿ ಕೌಶಲತೆ ಹೆಚ್ಚಿಸಿಕೊಳ್ಳಬೇಕು. ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು. ಮಾನವರಾಗಿ ಬದುಕಬೇಕು ಎಂದು ಶಾಸಕರು ಸಲಹೆ ನೀಡಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ಮಾತನಾಡಿ, ಕೊಡಗು ಜಿಲ್ಲೆ ಪ್ರಾಚೀನ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ಕಲೆ, ಸಂಸ್ಕೃತಿ, ಜಾನಪದ ಉಳಿಸಿ ಬೆಳೆಸುವಂತಾಗ ಬೇಕು ಎಂದರು.

ಕೊಡಗಿನ ಉದ್ದಗಲಕ್ಕೂ ೫೨ ಕ್ಕೂ ಹೆಚ್ಚು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ, ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಸಂಸ್ಕೃತಿಯನ್ನು ಪಸರಿಸುವಲ್ಲಿ ಶ್ರಮಿಸಲಾಗಿದೆ

(ಮೊದಲ ಪುಟದಿಂದ) ಎಂದು ಬಿ.ಎಸ್.ತಮ್ಮಯ್ಯ ನುಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆÀ ನಿರ್ಮಲ ಮಾತನಾಡಿದರು. ಐನ್‌ಮನೆ ಕೆಫೆಯ ಮಾಲೀಕ ತಮ್ಮು ಪೂವಯ್ಯ, ತೀರ್ಪುಗಾರರಾದ ಪೂರ್ಣಿಮಾ, ಮೇಘ, ಅನಿಲ್ ಕುಮಾರ್, ಇತರರು ಇದ್ದರು.

ಜಾನಪದ ಹಾಗೂ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೊಡಗು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಾಧ್ಯಾಪಕರಾದ ಕುಸುಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿವಕುಮಾರ್ ವಂದಿಸಿದರು.