ಗೋಣಿಕೊಪ್ಪಲು, ಜ. ೨೦: ಮಧ್ಯಮ ವರ್ಗದ ಕುಟುಂಬದಿAದ ಬಂದವರೇ ಹೆಚ್ಚಿನ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಜೀವನÀದಲ್ಲಿ ಉತ್ತಮ ಗುರಿ ಹೊಂದಿದ್ದಲ್ಲಿ ಸಾಧನೆ ಮಾಡಲು ವಿಫುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರತಿ ವಿದ್ಯಾರ್ಥಿಯು ತನ್ನ ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ಕೊಡಗಿಗೆ ಹಾಗೂ ದೇಶಕ್ಕೆ ಕೀರ್ತಿ ತರುವಂತವರಾಗಬೇಕು ಎಂದು ಕರ್ನಾಟಕ ಸರ್ಕಾರದ ಮುಖ್ಯ ಚೀಫ್ ಇಲೆಕ್ಟಿçಕಲ್ ಇನ್ಸ್ಪೆೆಕ್ಟರ್ ತೀತಿರ ರೋಶನ್ ಅಪ್ಪಚ್ಚು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಕಲಿಕಾ ಅಭ್ಯಾಸವನ್ನು ನಿರಂತರವಾಗಿ ಮಾಡಬೇಕು, ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಸಾಧನೆ ಮಾಡಲು ಶ್ರಮಿಸಬೇಕು. ಯಾವುದೇ ಕಷ್ಟ ಎದುರಾದರೂ ದೃತಿಗೆಡದೆ ತಮ್ಮ ಕರ್ತವ್ಯವನ್ನು ನಿರ್ವಹಣೆ ಮಾಡಬೇಕು. ಮುಂದೊAದು ದಿನ ಉತ್ತಮ ಭವಿಷ್ಯ ನಿಮ್ಮದಾಗಲಿದೆ. ಭಾರತ ದೇಶ ಮುನ್ನಡೆಸುವ ಜವಾಬ್ದಾರಿ ಯುವ ಜನಾಂಗದÀ ಮೇಲಿದೆ, ಪ್ರಪಂಚದಲ್ಲಿ ಹೆಚ್ಚಿನ ಯುವಕರನ್ನು ಹೊಂದಿದ ದೇಶ ಭಾರತವಾಗಿದೆ. ಯುವ ಸಮೂಹವನ್ನು ಅಡ್ಡದಾರಿಗೆ ತಳ್ಳಲು ಅನೇಕ ಕಾಣದ ಕೈಗಳು ಕೆಲಸ ನಿರ್ವಹಿಸುತ್ತಿವೆ. ಇವುಗಳಿಗೆ ಅವಕಾಶ ಮಾಡಿಕೊಡದಂತೆ ವಿದ್ಯಾರ್ಥಿಗಳು ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕು. ಮುಂದಿನ ೧೦ ವರ್ಷದಲ್ಲಿ ಭಾರತ ದೇಶ ಪ್ರಗತಿ ಹೊಂದಿದ ದೇಶದಲ್ಲೊಂದಾಗಲಿದೆ ಎಂದರು.

ಮAಗಳೂರಿನ ಸೌರಭ ಕಲಾ ಪರಿಷತ್ತಿನ ನಿರ್ದೇಶಕಿ ಡಾ. ಶ್ರೀವಿದ್ಯಾ ಮುರುಳಿಧರ್ ಮಾತನಾಡಿ, ಯುವತಿಯರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಇದನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತೀತಿರ ಶರ್ಮಿಳಾ ಅಪ್ಪಚ್ಚು ಮಾತನಾಡಿದರು.

ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಇಟ್ಟಿರ ಕೆ. ಬಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ ಕಾಲೇಜಿನ ಅಭಿವೃದ್ಧಿಗೆ ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಮುಖ್ಯ ಅತಿಥಿಗಳನ್ನು ಕಾಲೇಜಿನ ಮುಖ್ಯ ದ್ವಾರದಿಂದ ಕೊಡವ ಸಾಂಪ್ರದಾಯಿಕ ದುಡಿಕೊಟ್ಟ್ ಮೂಲಕ ಕರೆತರಲಾಯಿತು. ಎನ್‌ಸಿಸಿ ಕೆಡೆಟ್‌ಗಳು ಗೌರವ ವಂದನೆ ನೀಡಿದರು. ವೇದಿಕೆಯಲ್ಲಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಎ.ಎಸ್. ಪೂವಮ್ಮ ಸ್ಟುಡೆಂಟ್ ವೆಲ್ಫ್ಫೇರ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎಂ.ಕೆ. ಕಾರ್ಯಪ್ಪ, ಎನ್.ಎಂ. ವೈಷ್ಣವಿ, ಪಿ.ಪಿ. ಅಮನ್ ಹಾಗೂ ಟಿ.ಪಿ. ಪ್ರತಿಭಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಕೆ.ಎಂ. ಸುಬ್ರಮಣಿ, ಖಜಾಂಚಿ ಸಿ.ಡಿ. ಮಾದಪ್ಪ, ನಿರ್ದೇಶಕರುಗಳಾದ ಪುಚ್ಚಿಮಾಡ ಸುಭಾಶ್, ಸಿ.ಎಂ. ಅಚ್ಚಯ್ಯ, ಸಿ.ಎಂ. ಅಪ್ಪಯ್ಯ, ಬಿ.ಎ. ಚಂಗಪ್ಪ, ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.

ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಣ್ಣುವಂಡ ರತನ್ ಮಾದಯ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕಿ ಎಂ.ಕೆ. ಪದ್ಮ ವಾರ್ಷಿಕ ವರದಿ ಮಂಡಿಸಿದರು. ಉಪನ್ಯಾಸಕಿ ಕುಸುಮ್ ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.