ಮಡಿಕೇರಿ, ಜ. ೨೧: ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಶಾಖಾ ಕಚೇರಿಯನ್ನು ಕೊಡಗು ಜಿ.ಪಂ. ಸಿಇಒ ಡಾ. ಎಸ್. ಆಕಾಶ್ ಉದ್ಘಾಟಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ ಭವನದಲ್ಲಿರುವ ನೂತನ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಡಿಓಗಳ ಅಭ್ಯುದಯ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸಂಘವು ಕಾರ್ಯ ನಿರ್ವಹಿಸುವಂತಾಗಲಿ ಎಂದರು.

ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವೀಶ್ ಮಾತನಾಡಿ, ಪಿಡಿಓಗಳ ಹಿತ ರಕ್ಷಣೆ ಸಂಘದ ಮುಖ್ಯ ಧ್ಯೇಯವಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಯಶಸ್ವಿಗಾಗಿ ಅನುಷ್ಠಾನಿಸುವಲ್ಲಿ ಪಿಡಿಓಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘದಿAದ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯಿತಿಯ ನೂತನ ಮನರೇಗಾ ಶಾಖೆಯನ್ನು ಜಿ.ಪಂ. ಸಿಇಓ ಮತ್ತು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಉದ್ಘಾಟಿಸಿದರು.

ಯೋಜನಾ ನಿರ್ದೇಶಕರಾದ ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸಂಘದ ಉಪಾಧ್ಯಕ್ಷರಾದ ಲೋಕೇಶ್, ವೀಣಾ, ರಾಜ್ಯ ಪರಿಷತ್ ಸದಸ್ಯರಾದ ಬಿ.ವೈ. ಅಶೋಕ್ ಕುಮಾರ್ ಮತ್ತು ವಿವಿಧ ಗ್ರಾ.ಪಂ.ನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.