ಮಡಿಕೇರಿ, ಜ. ೨೧: ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಲೋಕಾಯುಕ್ತಕ್ಕೆ ಸಂಬAಧಿಸಿದAತೆ ವಿಲೇವಾರಿಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನಲ್ಲಿ ೭೦ ಪ್ರಕರಣಗಳು ಮಾತ್ರ ವಿಲೇವಾರಿಗೆ ಬಾಕಿ ಇದೆ. ಲೋಕಾಯುಕ್ತ ಎಂಬ ಸಂಸ್ಥೆ ಇದೆ ಎನ್ನುವ ಬಗ್ಗೆ ಬಹಳಷ್ಟು ಮಂದಿಗೆ ಮಾಹಿತಿಯಿಲ್ಲ. ಆದ್ದರಿಂದ ಲೋಕಾಯುಕ್ತ ಸಂಸ್ಥೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದರು.
ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ವಾಗದಂತೆ ಕೆಲಸ ಮಾಡಬೇಕು. ಕರ್ತವ್ಯಲೋಪಕ್ಕೆ ಸಂಬAಧಿಸಿದAತೆ ಲೋಕಾಯುಕ್ತಕ್ಕೆ ದೂರುಗಳು ಬಂದಲ್ಲಿ ಅವುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಕೆಯಿತ್ತರು.
ಸಂವಿಧಾನದ ಉದ್ದೇಶವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ನಮ್ಮ ಜವಾಬ್ದಾರಿಗಳೇನು ಎಂಬುದು ಅರಿವಾಗುತ್ತದೆ.
ರಾಷ್ಟç ಕವಿ ಕುವೆಂಪು ಅವರು ಹೇಳಿರುವಂತೆ ಎಲ್ಲರಿಗೂ ಸಮಪಾಲು, ಎಲ್ಲರಿಗೂ ಸಮಬಾಳು ಎಂಬುದೇ ಸಂವಿಧಾನದ ಮುಖ್ಯ ಉದ್ದೇಶವಾಗಿದೆ.
ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಅಂದರೆ ಸುಮ್ಮನೇ ಜೀವಿಸುವುದಲ್ಲ. ಕುಂದುಕೊರತೆ ಇಲ್ಲದೇ ಸಂರಕ್ಷಣಾತ್ಮಕವಾಗಿ ಜೀವಿಸುವುದೆ ಈ ಹಕ್ಕಿನ ಉದ್ದೇಶ. ಹಕ್ಕುಗಳನ್ನು ಸಂರಕ್ಷಿಸಬೇಕು. ಆ ಮೂಲಕ ಸಮೃದ್ಧವಾಗಿ ಜೀವಿಸಬೇಕು.
(ಮೊದಲ ಪುಟದಿಂದ) ಜನರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪರಿಹಾರ ಮಾಡದಿದ್ದರೆ ಅದು ಕರ್ತವ್ಯ ಲೋಪವಾಗುತ್ತದೆ. ಈ ರೀತಿ ಆದಾಗ ಲೋಕಾಯುಕ್ತ ಮಧ್ಯೆ ಪ್ರವೇಶ ಮಾಡುತ್ತದೆ.
ವೈಯಕ್ತಿಕ ಹಕ್ಕು ಹಾಗೂ ಸಾರ್ವಜನಿಕ ಹಕ್ಕುಗಳಲ್ಲಿ ನಿಯಮ ಉಲ್ಲಂಘನೆ ಆಗಬಾರದು. ಅಧಿಕಾರಿಗಳು ಕರ್ತವ್ಯ ಲೋಪವೆಸಗಬಾರದು. ಒಂದು ವೇಳೆ ಇಂತಹ ಘಟನೆಗಳು ನಡೆದರೆ ಲೋಕಾಯುಕ್ತ ಸಂಸ್ಥೆ ಮಧ್ಯ ಪ್ರವೇಶಿಸುವುದಲ್ಲದೇ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಫಣೀಂದ್ರ ಅವರು ನುಡಿದರು.
ಅಧಿಕಾರಿಗಳು ಕಾನೂನಿಗೆ ವಿರುದ್ಧವಾದ ಕೆಲಸ ಮಾಡಬಾರದು, ಮಾಡಬೇಕಾದ ಕರ್ತವ್ಯವನ್ನು ನಿಧಾನ ಮಾಡದೆ, ಸರಿಯಾಗಿ ಮಾಡಬೇಕು ಎಂದು ಅವರು ಹೇಳಿದರು.
ಸಮಸ್ಯೆ ಆಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಮಸ್ಯೆ ಉಂಟಾಗುವುದಿಲ್ಲ. ಎಸಿಬಿಯನ್ನು ರದ್ಧು ಮಾಡಲಾಗಿದ್ದು, ಲಂಚ ನಿಷೇಧ ಕಾಯ್ದೆ ಅನ್ವಯ ಕೆಲಸ ಮಾಡಬೇಕು. ಸಾರ್ವಜನಿಕರು ಲೋಕಾಯುಕ್ತಕ್ಕೆ ನೀಡುವ ದೂರುಗಳು ಸಮರ್ಪಕವಾಗಿರಬೇಕು, ಅಗತ್ಯ ದಾಖಲಾತಿಗಳನ್ನು ಒದಗಿಸಬೇಕು. ಒಂದುವೇಳೆ ದೂರುಗಳು ಸುಳ್ಳಾಗಿದ್ದರೆ ದೂರದಾರರ ಮೇಲೂ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿರುವುದರಿಂದ ಯಾರೂ ಕೂಡ ದುರುದ್ದೇಶಪೂರ್ವಕವಾದ ಸುಳ್ಳು ದೂರುಗಳನ್ನು ನೀಡಬಾರದು ಎಂದು ಅವರು ಹೇಳಿದರು.
ಸಂವಿಧಾನದಲ್ಲಿ ಶಾಸಕಾಂಗ ಕಾನೂನು ಜಾರಿ ಮಾಡಿದರೆ, ಕಾರ್ಯಾಂಗ ಅನುಷ್ಠಾನ ಗೊಳಿಸಲಿದೆ. ನ್ಯಾಯಾಂಗವು ಕಾನೂನನ್ನು ಸಂರಕ್ಷಣೆ ಮಾಡುತ್ತದೆ. ಜೊತೆಗೆ ಮಾಧ್ಯಮ ರಂಗವು ಸಮಾಜದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ ಮಾಡುತ್ತದೆ ಎಂದು ಅವರು ವಿವರಿಸಿದರು.
ಸಾರ್ವಜನಿಕರ ಕುಂದುಕೊರತೆ ಸಂಬAಧಿಸಿದAತೆ ಇಂದು ಲೋಕಾಯುಕ್ತಕ್ಕೆ ೪೦ ಅರ್ಜಿಗಳು ಸಲ್ಲಿಕೆ ಆಗಿದ್ದು, ಸಂಬAಧಪಟ್ಟ ಇಲಾಖೆ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಕರೆಸಿ ವಿಚಾರಣೆ ನಡೆಸಿದರು.
ಮಡಿಕೇರಿ ನಗರದಿಂದ ಜಿಲ್ಲಾ ಪಂಚಾಯತ್ ಕಚೇರಿ ಹೊರಭಾಗದಲ್ಲಿ ಇರುವುದರಿಂದ ಪ್ರತೀ ನಿತ್ಯ ಅರ್ಧ ಗಂಟೆಗೊಮ್ಮೆ ಬಸ್ ಸೌಕರ್ಯ ಕಲ್ಪಿಸುವಂತೆ ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ಫಣೀಂದ್ರ ಅವರು ನಿರ್ದೇಶನ ನೀಡಿದರು.
ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟಾçರ್ ಎನ್ಕ್ವಯರಿ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು, ಮೈಸೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೃಷ್ಣಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಮಡಿಕೇರಿ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಲೋಕೇಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಇಂದು ಸಭೆ: ಲೋಕಾಯುಕ್ತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಾ. ೨೨ ರಂದು (ಇಂದು) ನ್ಯಾಯಾಧೀಶರುಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಲೋಕಾಯುಕ್ತರಾದ ಫಣೀಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಸ್ಟೆಲ್ಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ದಾಖಲಾಗಿರುವ ದೂರುಗಳ ಸಂಬAಧ ತಾ. ೨೩ರಂದು ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು. ಲೋಕಾಯುಕ್ತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಹಿನ್ನೆಲೆ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಪ್ರಾಮಾಣಿಕ ಅಧಿಕಾರಿಗಳಲ್ಲದವರನ್ನು ಲೋಕಾಯುಕ್ತದಿಂದ ಕೈಬಿಡುವ ನಿಟ್ಟಿನಲ್ಲಿ ಲೋಕಾಯುಕ್ತರು ಈಗಾಗಲೇ ಕಾರ್ಯಪ್ರವೃತ್ತ ರಾಗಿದ್ದಾರೆ. ಲೋಕಾಯುಕ್ತ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ನೀಡುವಂತಾಗಬೇಕು. ನಮ್ಮ ಶಿಫಾರಸುಗಳನ್ನು ಜಾರಿಗೆ ತರುವಂತಾಗಬೇಕು ಎಂದು ಫಣೀಂದ್ರ ಅವರು ಹೇಳಿದರು.