ನಾಪೋಕ್ಲು, ಜ. ೨೦: ಒಕಿನವ ಶಿಬೋರಿಯೋ ಕರಾಟೆ ಡೂ ಆಫ್ ಇಂಡಿಯಾ ಆಂಡ್ ಇಂಟರ್‌ನ್ಯಾಷನಲ್ ಮಬುನಿ ಹಾ ಶಿತರ‍್ಯೂ ಕರಾಟೆ ಅಸೋಸಿಯೇಶನ್ ವತಿಯಿಂದ ಮೈಸೂರಿನಲ್ಲಿ ನಡೆದ ೨೯ನೇ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಿಲನ್ ಮತ್ತು ಧೀರಜ್ ಸಹೋದರರು ಭಾಗವಹಿಸಿ ಸಾಧನೆ ಮಾಡಿದ್ದಾರೆ.

ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಅವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರೆ, ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿ ಚೆಟ್ಟಿಯಾರಂಡ ಧೀರಜ್ ಕಾರ್ಯಪ್ಪ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕಟಾ ವಿಭಾಗದಲ್ಲಿ ಮೂರನೇ ಸ್ಥಾನಗಳಿಸಿದ್ದಾರೆ.

ಇವರು ನೆಲಜಿ ಗ್ರಾಮದ ಚೆಟ್ಟಿಯಾರಂಡ ಮನು ಮತ್ತು ಪವಿತಾ ದಂಪತಿ ಪುತ್ರರಾಗಿದ್ದು, ಸೆನ್ಸಾಯಿ ನಾಗೇಂದ್ರಪ್ಪ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.