ಮಡಿಕೇರಿ, ಜ. ೨೧: ಭಾರತ ಸರ್ಕಾರದ ಸೂಚನೆಯಂತೆ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಪರೀಕ್ಷಾ ಪೆ ಚರ್ಚಾ ಅಂಗವಾಗಿ ವಿವಿಧ ರೀತಿಯ ಸ್ಪರ್ಧೆ ಹಾಗೂ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುತ್ತಿದೆ.

ಪರೀಕ್ಷಾ ಭಯವನ್ನು ಕಡಿಮೆ ಮಾಡಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಪರೀಕ್ಷೆ ಕುರಿತ ವಿದ್ಯಾರ್ಥಿಗಳ ಮಾತುಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು. ಪರೀಕ್ಷಾ ಪೆ ಚರ್ಚಾದ ಹಿಂದಿರುವ ಆಶಯಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ವಿದ್ಯಾರ್ಥಿಗಳೇ ರಚಿಸುವುದು ಮತ್ತು ಪ್ರದರ್ಶಿಸುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಪಂಕಜಾಕ್ಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.