ಕುಶಾಲನಗರ, ಜ. ೨೦: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೈಚನಹಳ್ಳಿ ಬಿ.ಎಂ. ರಸ್ತೆ ಸರ್ವೆ ನಂ. ೧೧೫ ಮತ್ತು ೧೪೫ ರ ಆಸ್ತಿ ಬಗ್ಗೆ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ರಾಜ್ಯ ಉಚ್ಚ ನ್ಯಾಯಾಲಯ ಸ್ಥಳೀಯ ಆಡಳಿತಕ್ಕೆ ಆದೇಶ ನೀಡಿದೆ.
ಕುಶಾಲನಗರ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ನಕ್ಷೆಯಂತೆ ಬಡಾವಣೆಯಾಗಿ ಪರಿವರ್ತನೆಯಾಗದೆ ಇರುವುದರಿಂದ ಸದರಿ ಸರ್ವೆ ನಂ. ಜಾಗವನ್ನು ಅಧಿಕೃತವಾಗಿ ಖಾತೆ ಮಾಡಲು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರುತ್ತಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಆದೇಶ ನೀಡಲಾಗಿದೆ.
ಇದೇ ಆಸ್ತಿಗೆ ಸಂಬAಧಿಸಿದAತೆ ಇತ್ತೀಚೆಗೆ ವ್ಯಕ್ತಿಯೊಬ್ಬರು ಅನಧಿಕೃತವನ್ನು ಅಧಿಕೃತ ಮಾಡಿಕೊಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಬೆದರಿಕೆಯೊಡ್ಡಿ, ಹಲ್ಲೆ ನಡೆಸಿರುವ ಘಟನೆ ನಡೆದಿತ್ತು.