ಕೂಡಿಗೆ, ಜ. ೨೧: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ರಕ್ತದಾನ ಶಿಬಿರ ಮತ್ತು ಅಭಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು.
ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು. ರಕ್ತದಾನ ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ರಕ್ತದಾನದ ಮಹತ್ವವನ್ನು ತಿಳಿದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಬೇಕು ಎಂದು ಸಲಹೆ ನೀಡಿದರು.
ಮಂಗಳೂರು ವಿಶ್ವವಿದ್ಯಾ ನಿಲಯದ ಜ್ಞಾನ ಕಾವೇರಿ ಸ್ನಾತ ಕೋತ್ತರ ಕೇಂದ್ರ, ಚಿಕ್ಕಅಳುವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಅಭಾ ಕಾರ್ಡ್ ನೋಂದಣಿ ಕಾರ್ಯಕ್ರಮ ಜರುಗಿತು.
ಕೊಡಗು ವೈದಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾತನಾಡಿ, ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ ಎಂದರು.
ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕ ಡಾ. ಕೆ.ಕೆ. ಧರ್ಮಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಚ್ಚಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ರಕ್ತ ನೀಡುವ ಕುರಿತು ಅರಿವು ಮೂಡಿಸಬೇಕು ಹಾಗೂ ಹೆಚ್ಚು ರಕ್ತ ಸಂಗ್ರಹವಾಗುವAತೆ ಮಾಡಬೇಕು ಎಂದರು. ಕುಶಾಲನಗರ ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಾಂತಿ ಅವರು ಶಿಬಿರದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿರಂಗಾಲದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದರ್ಶನ್, ತೊರೆನೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ. ದೇವರಾಜ್, ಸೂಕ್ಷಾö್ಮಣು ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಐ.ಕೆ. ಮಂಜುಳಾ, ಡಾ. ಬಿ.ಎಸ್. ಗುಣಶ್ರೀ, ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ಅಭಾ ಕಾರ್ಡ್ ನೋಂದಣಿ ಕೂಡ ಮಾಡಲಾಯಿತು. ಕೇಂದ್ರದ ಬೋಧಕ ವೃಂದ, ಆಡಳಿತ ವೃಂದ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.