ಸುಂಟಿಕೊಪ್ಪ, ಜ. ೨೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ ಸೇವಾ ಪ್ರತಿನಿಧಿ ಜ್ಯೋತಿ ವಾಸು, ಗದ್ದೆಹಳ್ಳದ ಒಕ್ಕೂಟದ ಉಪಾಧ್ಯಕ್ಷ ಆನಂದ ಹಾಗೂ ಶ್ರೀ ಮುತ್ತಪ್ಪ ದೇವಸ್ಥಾನದ ಆರ್ಚಕ ಶಿವಮಣಿ ಅವರುಗಳು ಚಾಲನೆ ನೀಡಿದರು.
ಸುಂಟಿಕೊಪ್ಪ, ಗದ್ದೆಹಳ್ಳ ಹಾಗೂ ನಾರ್ಗಾಣೆ, ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.