ಸುಂಟಿಕೊಪ್ಪ, ಜ. ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಹಾಗೂ ಸ್ವಸಹಾಯ ಸಂಘದ ಸದಸ್ಯರು ಕಾನ್‌ಬೈಲ್ ಶ್ರೀ ರಾಮ ಮಂದಿರದಲ್ಲಿ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ಕಾನ್‌ಬೈಲ್ ಶ್ರೀ ರಾಮ ಮಂದಿರ ಅಧ್ಯಕ್ಷ ಬಿ.ಜಿ. ರಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಭವ್ಯ, ಕಾನ್‌ಬೈಲ್ ಒಕ್ಕೂಟದ ಅಧ್ಯಕ್ಷೆ ಖತೀಜ, ಉಪಾಧ್ಯಕ್ಷೆ ರೇಖಾ ಅವರುಗಳು ಶ್ರಮದಾನಕ್ಕೆ ಚಾಲನೆ ನೀಡಿದರು.
ನಾಕೂರು-ಶಿರಂಗಾಲ, ಕಾನ್‌ಬೈಲ್, ಮಂಜಿಕೆರೆ, ಮಳ್ಳೂರು, ಹೇರೂರು ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸುವುದರೊಂದಿಗೆ ಶ್ರದ್ಧಾ ಕಾರ್ಯವನ್ನು ನಡೆಸಿದರು.
ಈ ಸಂದರ್ಭ ಸೇವಾ ಪ್ರತಿನಿಧಿ ಯಶೋಧ ಬಸವರಾಜು ಹಾಗೂ ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಇದ್ದರು.