ಸೋಮವಾರಪೇಟೆ, ಜ. ೨೨: ಮುಂದಿನ ಒಂದೆರಡು ತಿಂಗಳುಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಸಹ ಬಿಜೆಪಿಯ ಗೆಲುವು ಮಾತ್ರ ಮುಖ್ಯ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚು ಕೆಲಸ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹೇಳಿದರು.

ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಪಕ್ಷದ ೬ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ-ವಿಜಯ ಸಂಕಲ್ಪ ಆಂದೋಲನದ ಪೂರ್ವಭಾವಿ ತಯಾರಿ ಕುರಿತ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಈ ಬಾರಿಯೂ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ರಾಜ್ಯದಲ್ಲಿ ೧೫೦ರ ಗುರಿಯೊಂದಿಗೆ ಪಕ್ಷವು ಕಾರ್ಯತಂತ್ರ ರೂಪಿಸುತ್ತಿದ್ದು, ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಕರೆ ನೀಡಿದರು.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಆಗಬೇಕು. ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ. ರೈತರು, ಮಹಿಳೆಯರಿಗೆ, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಬಿಜೆಪಿ ಸರ್ಕಾರದ ಯೋಜನೆಗಳು ತಲುಪಿವೆ. ಚುನಾವಣೆ ಸಂದರ್ಭ ಇವುಗಳನ್ನು ನೆನಪು ಮಾಡಿಸುವ ಕೆಲಸ ಆಗಬೇಕು ಎಂದರು.

ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವು