ಕೂಡಿಗೆ, ಜ. ೨೨: ಕೂಡುಮಂಗಳೂರುವಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ.ಕೆ. ಹೇಮಂತ್, ಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದರು. ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇದ್ದರೂ ಅವೆಲ್ಲವನ್ನು ಮರೆತು ಪಕ್ಷದ ಏಳಿಗೆಗೆ ದುಡಿಯಬೇಕು ಎಂದರು.
ಸAಭಾವ್ಯ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಮಾತನಾಡಿ, ತಾನು ಈ ಕ್ಷೇತ್ರದಲ್ಲಿ ಸುಮಾರು ೧೫ ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೆಂಬಲಿಗರು ಹಾಗೂ ಆತ್ಮೀಯರು ಜೊತೆಯಲ್ಲಿ ಇದ್ದಾರೆ. ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆ ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಸಾಗುತ್ತಿದೆ. ಅದೇ ನಿಟ್ಟಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಕೆಲಸ ನಿರ್ವಹಿಸುತ್ತಿದ್ದೇವೆ; ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು. ಕಾರ್ಯಕ್ರಮದಲ್ಲಿ ಹಲವಾರು ಮುಖಂಡರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಎಸ್‌ಟಿ ಘಟಕದ ಜಿಲ್ಲಾ ಅಧ್ಯಕ್ಷ ರಾಮಚಂದ್ರು, ಪಕ್ಷದ ಮುಖಂಡರಾದ ಶೇಖರ್, ಅಜ್ಜಳ್ಳಿ ರವಿ, ಕೃಷ್ಣಗೌಡ, ಭೀಮಣ್ಣ, ಕೃಷ್ಣಣ್ಣ, ಜಯಣ್ಣ, ಮಂಜು, ಕೆ.ಎನ್. ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.