ಮಡಿಕೇರಿ, ಜ. ೨೨: ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು ೨೦೧೭ ರಲ್ಲಿ ರೂಪಿಸಿದ ‘ಹೊಸ ಮರು ವ್ಯಾಖ್ಯಾನಿಸಿದ ಮಾನದಂಡ’ ದಡಿಯಲ್ಲಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು. ನಾಚಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕುರಿತು ಕೇಂದ್ರ ಬುಡಕಟ್ಟು ಮಂತ್ರಾಲಯ, ರಾಷ್ಟಿçÃಯ ಬುಡಕಟ್ಟು ಆಯೋಗ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಪ್ರಧಾನ ಕಾರ್ಯದರ್ಶಿ, ಬುಡಕಟ್ಟು ಕಲ್ಯಾಣ ಮಂತ್ರಾಲಯದ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಬುಡಕಟ್ಟು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಕೊಡಗಿನ ಮೂಲ ಬುಡಕಟ್ಟು ಜನಾಂಗವಾಗಿರುವ ಕೊಡವರನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದು ತ್ವರಿತವಾಗಿ ಆಗದಿದ್ದರೆ ಕೊಡವ ಬುಡಕಟ್ಟು ಜನಾಂಗದÀ ಭವಿಷ್ಯವು ಕತ್ತಲೆಯಲ್ಲಿ ಮುಳುಗುತ್ತದೆ. ಕೊಡವರ ಜಾನಪದ ಗುರುತು ಮತ್ತು ಭೌಗೋಳಿಕ-ರಾಜಕೀಯ ಅಸ್ತಿತ್ವಕ್ಕೆ ಹಾನಿಯಾಗಲಿದೆ. ಭಾರತ ದೇಶವು ಬಹು ಜನಾಂಗೀಯ ಹೂದೋಟದಂತಿದ್ದು, ಇತರ ಜನಾಂಗೀಯ ಗುಂಪುಗಳಿಗೆ ನೀಡಲಾಗುವ ಅದೇ ಸಾಂವಿಧಾನಿಕ ಪೋಷಣೆಯನ್ನು ಕೊಡವ ಬುಡಕಟ್ಟು ಜನಾಂಗಕ್ಕೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ೧೯೫೬ ರಲ್ಲಿ ಕೂರ್ಗ್ ಅನ್ನು ವಿಶಾಲ ಮೈಸೂರಿನಲ್ಲಿ ವಿಲೀನಗೊಳಿಸಿದ ನಂತರ, ಇಂದಿನ ಕರ್ನಾಟಕ ರಾಜ್ಯವು ಕೊಡವ ಜನಾಂಗದ ಎಲ್ಲಾ ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಹುಸಿ ಮಾಡಿತು ಎಂದು ಆರೋಪಿಸಿದ್ದಾರೆ.
ಕೊಡವ ಜನಾಂಗದೊಳಗೆ ಯಾವುದೇ ಉಪಪಂಗಡವಿಲ್ಲ, ನಾವು ಕೂರ್ಗ್ಗೆ ಮಾತ್ರ ಸೀಮಿತವಾಗಿದ್ದೇವೆ, ನಮ್ಮ ಜನಸಂಖ್ಯೆ ಕೂಡ ಕಡಿಮೆ ಇದೆ. ಆದ್ದರಿಂದ ಸೂಕ್ಷ÷್ಮ ಕೊಡವ ಜನಾಂಗವನ್ನು ರಕ್ಷಿಸಲು ಮತ್ತು ಅಧಿಕಾರ ನೀಡಲು ಸಂವಿಧಾನದಲ್ಲಿ ಉಳಿದಿರುವ ಏಕೈಕ ಆಯ್ಕೆಯೆಂದರೆ ಅವರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದು ಎಂದು ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ.
ಕೊಡವ ಜನಾಂಗೀಯ ಮರು ಅಧ್ಯಯನಕ್ಕಾಗಿ ಹೈಕೋರ್ಟ್ ನೀಡಿದ ಆದೇಶದ ಅನುಷ್ಠಾನಕ್ಕಾಗಿ ಬುಡಕಟ್ಟು ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು ೨೦೨೨ರ ಏಪ್ರಿಲ್‌ನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ನಮ್ಮೊಂದಿಗೆ ಸಭೆಯನ್ನು ನಡೆಸಿ ಅಭಿಪ್ರಾಯವನ್ನು ಸಂಗ್ರಹಿಸಿದರು. ಮರು ಅಧ್ಯಯನಕ್ಕೆ ಶಿಫಾರಸ್ಸು ಮಾಡಿದರು ಮತ್ತು ಕಡತವನ್ನು ಬುಡಕಟ್ಟು ಕಲ್ಯಾಣ ಇಲಾಖೆಗೆ ರವಾನಿಸಿದರು. ಆಗಸ್ಟ್ನಲ್ಲಿ ಕರ್ನಾಟಕ ಸರ್ಕಾರದ ಬುಡಕಟ್ಟು ಕಲ್ಯಾಣ ಸಚಿವರನ್ನು ಭೇಟಿ ಮಾಡಿದಾಗ ನಮ್ಮ ಬೇಡಿಕೆಗೆ ಒಪ್ಪಿಗೆ ನೀಡಿದರು ಮತ್ತು ಕಡತವÀನ್ನು ಕರ್ನಾಟಕದ ಸಿಎಂಗೆ ರವಾನಿಸಿದರು. ಆದರೆ ನಂತರದ ದಿನಗಳಲ್ಲಿ ನಮ್ಮ ಕಡತವನ್ನು ನಿರ್ಲಕ್ಷಿಸಲಾಗಿದೆ, ಇದು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ನಾಚಪ್ಪ ಟೀಕಿಸಿದರು.