ಸಿದ್ದಾಪುರ, ಜ. ೨೨: ಕಣ್ಣಂಗಾಲ ಗ್ರಾ.ಪಂ. ವ್ಯಾಪ್ತಿಯ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪ ತಿಳಿಸಿದರು.
ಸಿದ್ದಾಪುರದಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣ್ಣಂಗಾಲ ಗ್ರಾ.ಪಂ. ವ್ಯಾಪ್ತಿಯ ತೋಟದ ಲೈನ್ ಮನೆ ಹಾಗೂ ಬಾಡಿಗೆ ಮನೆಗಳಲ್ಲಿ ನೂರಾರು ಕುಟುಂಬಗಳು ತಲತಲಾಂತರಗಳಿAದ ವಾಸಮಾಡಿಕೊಂಡು ಬಂದಿವೆ. ಈ ಕುಟಂಬಗಳಿಗೆ ಗ್ರಾ.ಪಂ. ಆಡಳಿತ ಮಂಡಳಿಯು ನಿವೇಶನ ಒದಗಿಸಿಕೊಡದೇ ರಾಜಕೀಯದಲ್ಲಿ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಖಾಸಗಿ ಸಂಸ್ಥೆಗಳು ನೂರಾರು ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಅಂತಹ ಜಾಗಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ನಿವೇಶನ ರಹಿತರಿಗೆ ಹಂಚಬೇಕೆAದು ಒತ್ತಾಯಿಸಿದರು.
ಸಿ.ಐ.ಟಿ.ಯು ಸಂಘಟನೆಯ ಮುಖಂಡ ಹೆಚ್.ಬಿ. ರಮೇಶ್ ಮಾತನಾಡಿ, ಕಣ್ಣಂಗಾಲ ವ್ಯಾಪ್ತಿಯಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕಾಫಿ ತೋಟಗಳ ಲೈನ್‌ನಲ್ಲಿ ವಾಸವಾಗಿದ್ದಾರೆ. ಇವರುಗಳಿಗೆ ನಿವೇಶನ ಒದಗಿಸಿಕೊಡುವಂತೆ ಗ್ರಾ.ಪಂ.ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಆಡಳಿತ ಮಂಡಳಿ ನಿರ್ಲಕ್ಷö್ಯ ವಹಿಸುತ್ತಿರುವುದು ಖಂಡನೀಯ ಎಂದರು. ಗ್ರಾ.ಪಂ. ಕೂಡಲೇ ನಿವೇಶನ ರಹಿತರ ಪಟ್ಟಿಯನ್ನು ಮಾಡಿ, ನಿವೇಶನ ರಹಿತರಿಗೆ ಶಾಶ್ವತ ಜಾಗ ಒದಗಿಸುವಂತೆ ಆಗ್ರಹಿಸಿದರು.
ಗೋಷ್ಠಿಯಲ್ಲಿ ನಿವೇಶನ ರಹಿತ ಹೋರಾಟ ಸಮಿತಿಯ ಪ್ರಮುಖರಾದ ಬೈಜು, ರಷ್ಮಿ, ಮನು, ಗೌರಿ, ಗೀತಾ ಇದ್ದರು.