ಮಡಿಕೇರಿ, ಜ. ೨೨: ಕೊಡಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ೨೦೨೩-೨೪ನೇ ಸಾಲಿಗೆ ೬ನೇ ತರಗತಿ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಪ್ರವೇಶ ಪರೀಕ್ಷೆ ನಡೆಸಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅರ್ಜಿ ಸಲ್ಲಿಸುವ ದಿನಾಂಕದವರೆಗೂ ಚಾಲ್ತಿಯಲ್ಲಿರಬೇಕು. ವಾರ್ಷಿಕ ಆದಾಯ ಮಿತಿ, ಎಸ್‌ಸಿ.ಎಸ್‌ಟಿ/ಸಿ-೧ ರೂ. ೨.೫೦, ೨ಎ, ೨ಬಿ, ೩ಎ, ೩ಬಿ ರೂ. ೧ ಲಕ್ಷ), ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ-೨, ಇತರೆ ಮೀಸಲಾತಿ ಕೋರುವ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಪ್ರಮಾಣ ಪತ್ರಗಳೆಂದರೆ, ವಿಶೇಷ ಚೇತನ ಮಗು, ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷö್ಮ/ ಅತಿ ಸೂಕ್ಷö್ಮ ಮಗು, ಮಾಜಿ ಸೈನಿಕರ ಮಗು, ಆಶ್ರಮ/ ವಸತಿ ಶಾಲೆ ಮಗು, ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿ ಮಗು, ಬಾಲ ಕಾರ್ಮಿಕ, ವಿಧವೆ ಮಗು, ದೇವದಾಸಿ ಮಗು, ವಿಧುರನ ಮಗು, ಯೋಜನಾ ನಿರಾಶ್ರಿತರ ಮಗು, ಅನಾಥ ಮಗು, ಎಚ್.ಐ.ವಿ ಪೀಡಿತರ ಮಗು, ಆತ್ಮಹತ್ಯೆ ರೈತರ ಮಗು. ಸ್ಥಳೀಯ ಅಭ್ಯರ್ಥಿ (ಸ್ಥಳೀಯ ಅಭ್ಯರ್ಥಿ ಎಂದರೆ ಸ್ವಂತ ತಾಲೂಕಿನ ಅಭ್ಯರ್ಥಿ)

ಈ ವಿಶೇಷ ವರ್ಗಕ್ಕೆ ಸೇರಿದಲ್ಲಿ ಸಂಬAಧಿತ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸುವುದು. ಅರ್ಜಿಯನ್ನು ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದÀ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. (ಸ್ವಂತ ಜಿಲ್ಲೆ ಎಂದರೆ ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್ನಲ್ಲಿ ನಮೂದಿಸಿರುವ ಜಿಲ್ಲೆ.) ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ವಿವರದಲ್ಲಿ ಯಾವುದೇ ನ್ಯೂನ್ಯತೆಯನ್ನು ನೇರವಾಗಿ ಮಾರ್ಪಾಡು ಮಾಡಲು ಅರ್ಜಿ ಹಾಕುವ ಸ್ಥಳದಲ್ಲಿ ಅವಕಾಶವಿರುವುದಿಲ್ಲ. (ಆದ್ದರಿಂದ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಶಾಲೆಯಲ್ಲಿ ಸರಿಪಡಿಸಿದ ನಂತರ ಅದನ್ನು ಪರಿಗಣಿಸಲಾಗುವುದು.) ಹೆಚ್ಚಿನ ಮಾಹಿತಿಗೆ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು.

೨೦೨೩ ರ ಮಾರ್ಚ್ ೧೨ ರಂದು ಪರೀಕ್ಷೆ ನಡೆಯಲಿದೆ ಎಂದು ವಸತಿ ಶಾಲೆಗಳ ಜಿಲ್ಲಾ ಸಮನ್ವಯ ಅಧಿಕಾರಿಗಳು ಲೋಕೇಶ್ (೯೬೧೧೩೦೭೬೪೬) ಅವರು ತಿಳಿಸಿದ್ದಾರೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ

ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳು ಸೇವಾಸಿಂದು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ‘ಗ್ರಾಮ ಒನ್’ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ ಮತ್ತು ಅಲ್ಲದ ದ್ವಿ-ಚಕ್ರ/ ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಗರಿಷ್ಠ ರೂ.೫೦ ಸಾವಿರ ಸಹಾಯಧನ, ಉಳಿದ ಮೊತ್ತ ಸಾಲ.

ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‌ಕಾರ್ಡ್, ಗುರುತಿನ ಚೀಟಿ, ಆಧಾರ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್(೨ ವೀಲರ್) ಈ ದಾಖಲಾತಿಗಳನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂರವಾಣಿ ಸಂಖ್ಯೆ: ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕೆ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ ಎಂಜಿನಿಯರಿAಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) ೨೦೨೨-೨೩ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ ೨೮ ರವರೆಗೆ ಅವಧಿ ವಿಸ್ತರಿಸಲಾಗಿದೆ.

ಕಾರ್ಮಿಕರ ಮಾಸಿಕ ವೇತನ ರೂ. ೩೫ ಸಾವಿರ ಮೀರಿರಬಾರದು. (ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು). ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್‌ನಲ್ಲಿ WWW.ಞಟತಿbಚಿಠಿಠಿs.ಞಚಿಡಿಟಿಚಿಣಚಿಞಚಿ.gov.iಟಿ ಅರ್ಜಿ ಸಲ್ಲಿಸಬಹುದು (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.೫೦ ಪ.ಜಾ/ಪ.ಪಂ. ಶೇ.೪೫ ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು).

ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.೪೮, ೧ನೇ & ೨ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-೫೬೦೦೨೨ ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: ೦೮೦-೨೩೪೭೫೧೮೮, ೮೨೭೭೨೯೧೧೭೫, ೮೨೭೭೧೨೦೫೦೫, ೯೧೪೧೫೮೫೪೦೨, ೯೧೪೧೬೦೨೫೬೨ ಮೂಲಕ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.