ಸುಂಟಿಕೊಪ್ಪ, ಜ. ೨೨: ವಿದ್ಯೆ ಕಲಿಕೆ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಶಿಕ್ಷಣದಿಂದ ಯಾವ ಮಕ್ಕಳು ವಂಚಿತರಾಗಬಾರದು. ಕಲಿಕಾಹಬ್ಬ ಮಕ್ಕಳ ವಿವಿಧ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಹಾಗೂ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗೆ ಹೋಗದ ಮಕ್ಕಳನ್ನು ಹುರಿದುಂಬಿಸಿ ಶಾಲೆಗೆ ಕರೆತರಲು ವಿದ್ಯಾರ್ಥಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಮುಂದಾಗಬೇಕು ಶಾಲೆಗಳು ದೇವಾಲಯವಿದ್ದಂತೆ ಜ್ಞಾನ ದೇಗುಲವಾಗಿದೆ ಎಂದು ಕರೆ ನೀಡಿದರು.

ಕೊಡಗು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವಿ. ರಂಗದಾಮಯ್ಯ ಮಾತನಾಡಿ, ಕಲಿಕಾ ಹಬ್ಬ ಮಕ್ಕಳಿಗೆ ನಾಡಹಬ್ಬವಿದ್ದಂತೆ ಸಾಹಿತ್ಯ, ಚಿತ್ರಕಲೆ, ನೃತ್ಯ ಹಾಗೂ ಹಾಡು ಮೊದಲಾದ ವಿಭಾಗದಲ್ಲಿ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಲು ಸರಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಗ್ರಾ.ಪಂ. ಉಪಾÀಧ್ಯಕ್ಷ ಪ್ರಸಾದ್ ಕುಟ್ಟಪ್ಪ, ತಾ.ಪಂ. ಮಾಜಿ ಸದಸ್ಯೆ ವಿಮಲಾವತಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ವಹಿಸಿದ್ದರು.

ಸುಂಟಿಕೊಪ್ಪ ಗ್ರಾ.ಪಂ. ಸದಸ್ಯರುಗಳಾದ ಆಲಿಕುಟ್ಟಿ, ಶಬ್ಬೀರ್, ಮಂಜುನಾಥ, ಸೋಮನಾಥ, ವಸಂತಿ, ನಾಗರತ್ನ ಸುರೇಶ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್, ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ, ಸರಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಗೀತಾ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಕೊಡಗು ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಖಜಾಂಚಿ ಟಿ.ಜೆ. ಶೈಲಾ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಇ. ನಂದ, ಸರಕಾರಿ ಪ್ರಾಥಮಿಕ ಶಾಲೆಯ ನೌಕರರ ಸಂಘದ ಸಹಕಾರ್ಯದರ್ಶಿ ಸೌಭಾಗ್ಯ, ಸಿಆರ್.ಪಿ. ಸೀಮಾ ಉಪಸ್ಥಿತರಿದ್ದರು.