ಸಿದ್ದಾಪುರ, ಜ. ೨೨: ಸರ್ಕಾರಿ ಆಸ್ಪತ್ರೆ ಗಳಲ್ಲಿ ಸ್ವಚ್ಛತೆ ಗೊಳಿಸುವವರು ಹಾಗೂ ಡಿ ಗ್ರೂಪ್ ನೌಕರರಿಗೂ ಸರ್ಕಾರ ಹೆಚ್ಚಿನ ವೇತನ ನೀಡಬೇಕೆಂದು ಸರ್ಕಾರಿ ಆಸ್ಪತ್ರೆ ಸ್ವಚ್ಛತಾ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಆರ್ ಭರತ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾದÀ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಸುಮಾರು ವರ್ಷಗಳಿಂದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನೌಕರರಿಗೆ ಹಾಗೂ ಡಿ ಗ್ರೂಪ್ ಸಿಬ್ಬಂದಿಗಳಿಗೆ ಕನಿಷ್ಟ ವೇತನವನ್ನೂ ನೀಡದೇ ದುಡಿಸಿಕೊಳ್ಳುತ್ತಿರುವುದು ಖಂಡನೀಯ ಎಂದರು. ಸ್ವಚ್ಛತಾಗಾರರು ಹಾಗೂ ಡಿ ಗ್ರೂಪ್ ನೌಕರರಿಗೆ ಸರ್ಕಾರ ನೀಡುತ್ತಿರುವ ವೇತನವನ್ನು ಮಧÀ್ಯವರ್ತಿಗಳು ಹೆಚ್ಚು ವೇತನ ಪಡೆದು, ನೌಕರರಿಗೆ ನೀಡದೇ ಅನ್ಯಾಯ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದುಡಿಯುತ್ತಿರುವ ಅಸಂಘಟಿತ ನೌಕರರಿಗೆ ಸಮರ್ಪಕವಾದ ವೇತನ ನೀಡದೇ, ರಜಾ ದಿನಗಳಲ್ಲೂ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆ ಸ್ವಚ್ಛತಾ ಸಂಘಟನೆಯ ಪದಾಧಿಕಾರಿ ದೀಪ್ತಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದರೆ ನಮಗೆ ವೇತನವನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ, ಕನಿಷ್ಟ ವೇತನ ಹಾಗೂ ಭವಿಷ್ಯ ನಿಧಿಯನ್ನೂ ನೀಡುತ್ತಿಲ್ಲ. ಕೆಲಸ ಖಾಯಂಗೊಳಿಸದೇ ಹಗಲಿರುಳು ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು. ರಜೆ ಮಾಡಿದ್ದಲ್ಲಿ ಕೆಲಸದಿಂದ ತೆಗೆದುಹಾಕುವುದಾಗಿ ಗುತ್ತಿಗೆ ಪಡೆದ ಸಂಸ್ಥೆ ಬೆದರಿಸುತ್ತಿರುವುದಾಗಿ ಆರೋಪಿಸಿದರು. ಗೋಷ್ಠಿಯಲ್ಲಿ ಪ್ರಮುಖರಾದ ಪಿ.ಐ. ಅಜೇಶ್ ಹಾಜರಿದ್ದರು.