ಸೋಮವಾರಪೇಟೆ, ಜ. ೨೪: ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸೇರಿದಂತೆ ಪಕ್ಷದ ಪ್ರಮುಖರು ತಾ. ೨೪ ರಂದು (ಇಂದು) ಸೋಮವಾರಪೇಟೆಗೆ ಭೇಟಿ ನೀಡಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೨೪ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ, ಪಕ್ಷದ ಮುಖಂಡ ನಾಪಂಡ ಮುತ್ತಪ್ಪ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಪಕ್ಷ ಸಂಘಟನೆ, ಬೂತ್ಸಮಿತಿ ರಚನೆ ಹಾಗೂ ಪಂಚರತ್ನ ಯಾತ್ರೆಯ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾವುದು ಎಂದರು.
ಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಪಿ.ಕೆ. ವಿಜಿತ್, ಎಂ.ಎ. ರುಬಿನಾ, ಜಯಾನಂದ, ಹೊಸಬೀಡು ಹೂವಯ್ಯ ಇದ್ದರು.