ಕುಶಾಲನಗರ, ಜ. ೨೩: ಪೊಲೀಸರ ಭಯದಿಂದ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕುಶಾಲನಗರ ಸಂಚಾರಿ ಪೊಲೀಸ್‌ಠಾಣೆ ವತಿಯಿಂದ ಸುಂದರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸ ಲಾಗಿದ್ದ ‘ರಸ್ತೆ ಸುರಕ್ಷಾ ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು. ಪೊಲೀಸರಿಗಾಗಿ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಜೀವದ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಕೀಲ ಕೆ.ಬಿ. ಮೋಹನ್ ಕುಮಾರ್ ಮಾತನಾಡಿ, ವಾಹನ ಚಾಲನೆ ವೇಳೆ ಅಗತ್ಯ ದಾಖಲಾತಿಗಳ ಬಗ್ಗೆ ಹಾಗೂ ಮೋಟಾರು ವಾಹನ ಕಾಯ್ದೆಯ ಬಗ್ಗೆ ವಿವರಣೆ ನೀಡಿದರು.

ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೆಚ್.ಟಿ. ಗೀತಾ ಮಾತನಾಡಿ, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿದರು.

ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಪ್ರವೀಣ್‌ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಗಳನ್ನು ತಿಳಿಸುವ ೧೦ ನಿಮಿಷದ ವೀಡಿಯೋವನ್ನು ಪ್ರದರ್ಶನ ಮಾಡಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯ ಕ್ರಮಾಧಿಕಾರಿ ಡಾ.ಎಸ್. ಸುನೀಲ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭ ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೆಚ್.ಜೆ. ಚಂದ್ರಪ್ಪ, ವಕೀಲ ಎಸ್.ಕೆ. ಮಂಜುನಾಥ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ. ಶಂಶುದ್ಧೀನ್ ಇದ್ದರು.