ವೀರಾಜಪೇಟೆ, ಜ. ೨೩: ವೀರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ೭೪ನೇ ಗಣರಾಜ್ಯೋತ್ಸವ ಅಂಗವಾಗಿ ತಾ. ೨೭ ರಂದು ಪುರಭವನದಲ್ಲಿ ಪೂರ್ವಾಹ್ನ ೧೦.೩೦ ಗಂಟೆಗೆ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸ ಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ಹೇಳಿದರು. ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಶಾಲಾ ಮಕ್ಕಳಲ್ಲಿ ಉತ್ತಮವಾದ ಪ್ರತಿಭೆಗಳಿವೆ. ಅಂತಹ ಪ್ರತಿಭೆಗಳನ್ನು ಹೊರಹಾಕಲು ಸೂಕ್ತ ವೇದಿಕೆಗಳ ಕೊರತೆ ಇದ್ದು, ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.

೧ ರಿಂದ ೪ನೇ ತರಗತಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ (ಒಂದು ಶಾಲೆಯಿಂದ ಇಬ್ಬರಿಗೆ ಮಾತ್ರ ಅವಕಾಶ), ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಹಾಡಿಗೆ ನೃತ್ಯ (ಒಂದು ಶಾಲೆಯಿಂದ ೬ ವಿದ್ಯಾರ್ಥಿಗಳ ೨ ತಂಡಗಳಿಗೆ ಮಾತ್ರ ಅವಕಾಶ) ನೀಡಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮ ೧೧ ಗಂಟೆಗೆ ನಡೆಯಲಿದ್ದು, ಕರ್ನಾಟಕ ಸಂಘಸ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಜ್ಜಿಕುಟ್ಟಿರ ಪೊನ್ನಣ್ಣ, ಸಮಾಜ ಸೇವಕ ತೇಲಪಂಡ ಶಿವಕುಮಾರ್ ಉಪಸ್ಥಿತರಿರುವರು ಎಂದು ಹೇಳಿದರು.