ಸೋಮವಾರಪೇಟೆ, ಜ. ೨೩ : ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಅನೇಕ ದಶಕಗಳಿಂದ ವಾಸವಿರುವ ೨೦೦ಕ್ಕೂ ಅಧಿಕ ಕುಟುಂಬಗಳಿಗೆ ಇಂದಿಗೂ ನಿವೇಶನ ಹಕ್ಕುಪತ್ರ ನೀಡಿಲ್ಲ. ಈ ಬಗ್ಗೆ ಕಂದಾಯ ಇಲಾಖೆ ತುರ್ತು ಗಮನ ಹರಿಸಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿ ಕರು ಆಗ್ರಹಿಸಿದರು.
ಕಂದಾಯ ಇಲಾಖೆ ವತಿಯಿಂದ ಮಸಗೋಡು ಗ್ರಾಮದ ಸಿದ್ದೇಶ್ವರ ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ-ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಈ ಬಗ್ಗೆ ಗ್ರಾಮಸ್ಥರು ಗಮನ ಸೆಳೆದರು.
ನೇರುಗಳಲೆ ಗ್ರಾ.ಪಂ. ಉಪಾಧ್ಯಕ್ಷ ಪ್ರವೀಣ್ ಅವರು ವಿಷಯ ಪ್ರಸ್ತಾಪಿಸಿ, ತಣ್ಣೀರುಹಳ್ಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ೮೮ ಎಕರೆ ಪೈಸಾರಿ ಜಾಗದ ಪೈಕಿ ೨೦ ಎಕರೆ ಸ್ಥಳದಲ್ಲಿ ೨೦೦ ಕುಟುಂಬಗಳು ವಾಸಿಸುತ್ತಿದ್ದು, ಈವರೆಗೆ ಸ್ಥಳಕ್ಕೆ ಯಾವುದೇ ದಾಖಲಾತಿ ಇಲ್ಲದಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.
ಈ ಬಗ್ಗೆ ಕೂಡಲೇ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಪ್ರತಿ ಕುಟುಂಬಕ್ಕೆ ಮೂರುಮುಕ್ಕಾಲು ಸೆಂಟ್ ಜಾಗದ ನಿವೇಶನಕ್ಕೆ ದಾಖಲಾತಿ ಮಾಡಿಕೊಡಬೇಕು. ಸ್ಮಶಾನಕ್ಕೆ ಸ್ಥಳ ನಿಗದಿಗೊಳಿಸಿ ಕೊಡಬೇಕೆಂದು ಮನವಿ ಮಾಡಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ನರಗುಂದ್ ಅವರು, ಸ್ಥಳದ ಹಿಡುವಳಿ ಸಮಸ್ಯೆ ಇದ್ದು, ಅರಣ್ಯಾಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ದಾಖಲಾತಿ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರದ ಮಹಾತ್ವಾಕಾಂಕ್ಷೆಯ ಗ್ರಾಮ ವಾಸ್ತವ್ಯ ಯೋಜನೆಯಿಂದ ಗ್ರಾಮೀಣ ಜನರು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬAಧಿಸಿದAತೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದರೆ, ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾ ಗಾಂಧಿ ವೃದ್ಧಾಪ್ಯವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಅಂತ್ಯಸAಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯ ಎಂದು ತಹಶೀಲ್ದಾರ್ ತಿಳಿಸಿದರು.
ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಿಕೊಳ್ಳಲು ಇಲಾಖೆಗಳಿಗೆ ಜನರು ಅಲೆಯಬೇಕಾಗಿತ್ತು. ಇಂತಹ ಕಾರ್ಯಕ್ರಮಗಳಿಂದ ಒಂದೇ ಸ್ಥಳದಲ್ಲಿ ಹಲವು ಕೆಲಸಗಳನ್ನು ಮಾಡಿಸಿಕೊಳ್ಳಲು ಅನುಕೂಲವಾಗು ತ್ತದೆ ಎಂದರು.
ಪಂಚಾಯಿತಿ ಸದಸ್ಯ ವಿನಯ್ ಸಂಭ್ರಮ್ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಕೇವಲ ಒಂದೆರಡು ಗ್ರಾಮಗಳ ಸಮಸ್ಯೆ ಪರಿಹಾರಕ್ಕೆ ಬಳಸಿಕೊಳ್ಳುವ ಬದಲು ಗ್ರಾ.ಪಂ. ವ್ಯಾಪ್ತಿಯ ಎಲ್ಲ ಗ್ರಾಮಗಳನ್ನು ಸೇರಿಸಿಕೊಂಡು ನಡೆಸಿದಲ್ಲಿ ಹೆಚ್ಚಿನ ಅನುಕೂಲವಾಗುತ್ತಿತ್ತು. ಗ್ರಾಮ ವಾಸ್ತವ್ಯ ಮಾಡಿ ಸ್ಥಳ ಪರಿಶೀಲಿಸಿದಲ್ಲಿ ಅನೇಕ ಸಮಸ್ಯೆಗಳು ಪರಿಹಾರ ಮಾಡಬಹು ದೆಂದು ಅಭಿಪ್ರಾಯಿಸಿದರು.
ಗ್ರಾಮಸ್ಥರು ಕಂದಾಯ ಇಲಾಖೆ ಮತ್ತು ಸಂಧ್ಯಾ ಸುರಕ್ಷಾ ವೇತನ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದರು. ಸಭೆಯಲ್ಲಿ ಮಸಗೋಡು ಗ್ರಾಮದ ಅಧ್ಯಕ್ಷ ಭುವನ್, ಗ್ರಾ.ಪಂ. ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.