ಮಡಿಕೇರಿ, ಜ. ೨೩: ಭಾರತ ಸರ್ಕಾರ ನೆಹರು ಯುವ ಕೇಂದ್ರ, ಎಫ್‌ಎಂಕೆಎAಸಿ ಕಾಲೇಜು, ಆದರ್ಶ ಮಹಿಳಾ ಸಮಾಜ ಸಂಯುಕ್ತಾಶ್ರಯದಲ್ಲಿ ಯುವ ಮುಂದಾಳತ್ವದ ಮತ್ತು ಸಮುದಾಯ ಅಭಿವೃದ್ಧಿ ತರಬೇತಿ ಬಲ್ಲಮಾವಟಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ ವಹಿಸಿದ್ದರು. ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ೭೫ ಶಿಬಿರಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಭಾರತ ಸರ್ಕಾರ ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಆಶ್ರಯದಲ್ಲಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರಾಝಿಕ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.