*ಗೋಣಿಕೊಪ್ಪ, ಜ. ೨೩: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ವಿಭಾಗದಲ್ಲಿ÷ಕಲಿಕಾ ಹಬ್ಬ ನಡೆಯಿತು. ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಗುವು ತನ್ನ ಬಾಲ್ಯವನ್ನು ಸಂಭ್ರಮಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಲಿಕಾ ಹಬ್ಬವನ್ನು ನಡೆಸುತ್ತಿದೆ ಎಂದು ಹೇಳಿದರು.

ವೀರಾಜಪೇಟೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ತಾಲೂಕು ಕಲಿಕಾ ಹಬ್ಬದ ನೋಡಲ್ ಅಧಿಕಾರಿ ಗೀತಾಂಜಲಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಚಂದನ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷÀರಾದ ದಶಮಿ ಸದಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಕೆ.ಪಿ.ಎಸ್. ಪ್ರೌಢಶಾಲೆಯ ಉಪ ಪ್ರಾಂಶುಪಾಲ ಎಂ.ಯು. ಚಂಗಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.