ಮಡಿಕೇರಿ, ಜ. ೨೩: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸರಗೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ ಬಂಜೆತನ ನಿವಾರಣೆ ಕುರಿತಂತೆ ಕೊಡಗು ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಮಡಿಕೇರಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ರವೀಂದ್ರ ರೈ ಬಿ.ಕೆ. ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕಾರ್ಯಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ|| ಚಂದ್ರಶೇಖರ್ ಕೆ.ಎನ್. ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಮುರುಳೀಧರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.