ಮಡಿಕೇರಿ, ಜ.೨೪: ಜಿಲ್ಲಾಡಳಿತ ವತಿಯಿಂದ ತಾ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಎಂಎಲ್‌ಸಿ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ. ಸಿಇಓ ಡಾ.ಆಕಾಶ್ ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.