ಮತದಾರರಿಗೆ ಹಣದ ಆಮಿಷ-ಬಿಜೆಪಿ ವಿರುದ್ಧ ದೂರು
ಬೆಂಗಳೂರು, ಜ. ೨೫: ರಾಜ್ಯ ವಿಧಾನಸಭಾ ಚುನಾವಣೆ ಸನಿಹದಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಹಣದ ಆಮಿಷವೊಡ್ಡಿರುವ ಆರೋಪದ ಮೇಲೆ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟಾçಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಕ್ಷ ಪೊಲೀಸರಿಗೆ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ದೂರಿನ ಪತ್ರಕ್ಕೆ ಸಹಿ ಹಾಕಿದ್ದು, ತಮ್ಮ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಗೋಕಾಕ್ ಬಿಜೆಪಿ ಶಾಸಕ ಜಾರಕಿಹೊಳಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿ ಮತಕ್ಕೆ ೬,೦೦೦ ರೂಪಾಯಿ ನೀಡುವುದಾಗಿ ಇತ್ತೀಚೆಗೆ ಸಾರ್ವಜನಿಕವಾಗಿ ಹೇಳಿದ್ದರು. ಈಗ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ್ದ ಜಾರಕಿಹೊಳಿ, ಹಾಲಿ ಕಾಂಗ್ರೆಸ್ ಶಾಸಕ ೩,೦೦೦ ರೂಪಾಯಿ ಮೌಲ್ಯದ ಉಡುಗೊರೆ ಹಾಗೂ ನಗದುಗಳನ್ನು ನೀಡಿದರೆ, ನಾನು ಮತದಾರರಿಗೆ ೬,೦೦೦ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ನೀಡುತ್ತೇನೆ ಎಂದು ಜಾರಕಿಹೊಳಿ ಹೇಳಿದ್ದರು.
ಮೋದಿ ಕುರಿತ ಸಾಕ್ಷö್ಯಚಿತ್ರ ಪ್ರದರ್ಶನ-ನಾಲ್ವರ ಬಂಧನ
ನವದೆಹಲಿ, ಜ. ೨೫: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷö್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘೋಷಿಸಿದ ನಂತರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಯ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕ್ಯಾಂಪಸ್‌ನಲ್ಲಿ ಸಾಕ್ಷö್ಯಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ ಮತ್ತು ವಿಶ್ವವಿದ್ಯಾಲಯದ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲು ಪಟ್ಟಭದ್ರ ಹಿತಾಸಕ್ತಿಗಳನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಜಾಮಿಯಾ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಹೇಳಿದೆ. ಸಾಕ್ಷö್ಯಚಿತ್ರ ಪ್ರದರ್ಶನಕ್ಕೆ ಕೆಲವೇ ಗಂಟೆಗಳ ಮುನ್ನ ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಜಿಪ್ಟ್ ಅಧ್ಯಕ್ಷರೊಂದಿಗೆ ಮೋದಿ ಚರ್ಚೆ
ನವದೆಹಲಿ, ಜ. ೨೫: ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಭಾರತ ಮತ್ತು ಈಜಿಪ್ಟ್ ರಕ್ಷಣೆ, ಸೈಬರ್ ಭದ್ರತೆ, ವ್ಯಾಪಾರ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ ಒಪ್ಪಂದಗಳನ್ನು ಉಭಯ ನಾಯಕರು ವಿನಿಮಯ ಮಾಡಿಕೊಂಡರು. ಸಿಸಿ ಅವರೊಂದಿಗಿನ ವ್ಯಾಪಕ ಚರ್ಚೆಯ ನಂತರ, ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ, ಭಯೋತ್ಪಾದನೆಯು ಮಾನವೀಯತೆಗೆ ಅತ್ಯಂತ ಗಂಭೀರವಾದ ಭದ್ರತಾ ಬೆದರಿಕೆಯಾಗಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಲು ಕಠಿಣ ಕ್ರಮಗಳ ಅಗತ್ಯವಿದೆ ಎಂದು ಸಿಸಿ ಒಪ್ಪಿಕೊಂಡರು ಎಂದು ಮೋದಿ ತಿಳಿಸಿದ್ದಾರೆ. ಉಭಯ ನಾಯಕರು ಸಂಸ್ಕೃತಿ, ಐಟಿ, ಸೈಬರ್ ಭದ್ರತೆ, ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವ ಐದು ಒಪ್ಪಂದಗಳಿಗೆ ಸಹಿ ಹಾಕಿದರು. ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ೧೨ ಶತಕೋಟಿ ಡಾಲರ್‌ಗೆ ಕೊಂಡೊಯ್ಯಲು ಉಭಯ ನಾಯಕರು ನಿರ್ಧರಿಸಿದ್ದಾರೆ. ರಕ್ಷಣಾ ಉದ್ಯಮಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮತ್ತು ಭಯೋತ್ಪಾದನಾ ನಿಗ್ರಹ ಮಾಹಿತಿ ಮತ್ತು ಗುಪ್ತಚರ ವಿನಿಮಯವನ್ನು ಹೆಚ್ಚಿಸಲು ಎರಡೂ ರಾಷ್ಟçಗಳು ನಿರ್ಧರಿಸಿವೆ ಎಂದು ಪ್ರಧಾನಿ ಹೇಳಿದರು. ಈ ವೇಳೆ ಮಾತನಾಡಿದ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ತಮ್ಮ ದೇಶದಲ್ಲಿ ಸಾಕಷ್ಟು ಹೂಡಿಕೆ ಅವಕಾಶಗಳು ಲಭ್ಯವಿರುವುದರಿಂದ ಈಜಿಪ್ಟ್ನಲ್ಲಿ ಭಾರತೀಯ ಕಂಪನಿಗಳ ಹೂಡಿಕೆಯನ್ನು ಹೆಚ್ಚಿಸಲು ಚರ್ಚೆ ನಡೆಸಲಾಯಿತು. ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರದಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತು ಎರಡೂ ದೇಶಗಳು ಮಾತುಕತೆ ನಡೆಸಿವೆ ಎಂದರು.
ಮಹಿಳಾ ಐಪಿಎಲ್-ಐದು ತಂಡಗಳು ಮಾರಾಟ
ಮುಂಬೈ, ಜ. ೨೫: ವಿಶ್ವದ ಅತ್ಯಂತ ಜನಪ್ರಿಯ ಟಿ-೨೦ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ಮಹಿಳಾ ಐಪಿಎಲ್ ಅನ್ನು ಆರಂಭಿಸುತ್ತಿದ್ದು, ಬುಧವಾರ ಚೊಚ್ಚಲ ಆವೃತ್ತಿಯ ಐದು ತಂಡಗಳು ಮಾರಾಟವಾಗಿವೆ. ಈ ಹರಾಜಿನಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬರೋಬ್ಬರಿ ೪೬೬೯.೯೯ ಕೋಟಿ ರೂಪಾಯಿ ಆದಾಯ ಗಳಿಸಿದೆ. ೧೨೮೯ ಕೋಟಿ ರೂಪಾಯಿಗೆ ಅಹಮದಾಬಾದ್ ತಂಡ ಖರೀದಿಸಿದ ಅದಾನಿ ಸ್ಪೋರ್ಟ್ಸ್ಲೈನ್ ಹರಾಜಿನಲ್ಲಿ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಐದು ಫ್ರಾಂಚೈಸಿಗಳು ತಮಗೆ ಬೇಕಾದ ತಂಡಗಳನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದು, ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು, ಅಹಮದಾಬಾದ್, ಮುಂಬೈ, ಡೆಲ್ಲಿ ಹಾಗೂ ಲಕ್ನೋ ತಂಡಗಳು ಕಣಕ್ಕಿಳಿಯಲಿವೆ. ಉಳಿದ ಫ್ರಾಂಚೈಸಿಯು ೧೦೦೦ ಕೋಟಿಗಿಂತ ಅಧಿಕ ಬಿಡ್ ಮಾಡಲಿಲ್ಲ. ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್ ಸಂಸ್ಥೆ ರೂ. ೯೧೨.೯೯ ಕೋಟಿ ನೀಡಿ ಮುಂಬೈ ಫ್ರಾಂಚೈಸಿಯನ್ನು ಖರೀದಿ ಮಾಡಿದೆ. ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್ ಸಂಸ್ಥೆ ರೂ. ೯೦೧ ಕೋಟಿ ನೀಡಿ ಬೆಂಗಳೂರು ಫ್ರಾಂಚೈಸಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಜೆಎಸ್‌ಡಬ್ಲ್ಯೂ ಜಿಎಂಆರ್ ಕ್ರಿಕೆಟ್ ಪ್ರೆöÊವೇಟ್ ಲಿಮಿಟೆಡ್ ಸಂಸ್ಥೆ ರೂ. ೮೧೦ ಕೋಟಿ ನೀಡಿ ಡೆಲ್ಲಿ ಫ್ರಾಂಚೈಸಿಯನ್ನು ಪಡೆದುಕೊಂಡಿದೆ.
ಟಿಎAಸಿ ವಕ್ತಾರ ಸಾಕೇತ್ ಗೋಖಲೆ ಬಂಧನ
ಅಹಮದಾಬಾದ್, ಜ. ೨೫: ಕ್ರೌಡ್ ಫಂಡಿAಗ್ ಮೂಲಕ ಸಂಗ್ರಹಿಸಿದ ಹಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ಗುಜರಾತ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗೋಖಲೆ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ. ಕ್ರೌಡ್ ಫಂಡಿAಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗುಜರಾತ್ ಪೊಲೀಸರು ಗೋಖಲೆ ಅವರನ್ನು ದೆಹಲಿಯಲ್ಲಿ ಡಿಸೆಂಬರ್ ೨೯ ರಂದು ಬಂಧಿಸಿದ್ದರು.
ಬಹುಮಹಡಿ ಕಟ್ಟಡ ಕುಸಿತದಿಂದ ಸಾವು-ನೋವು
ಲಖನೌ, ಜ. ೨೫: ಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ ಪುತ್ರನನ್ನು ಬುಧವಾರ ಬಂಧಿಸಲಾಗಿದೆ. ಎಸ್‌ಪಿ ಶಾಸಕ ಮತ್ತು ಮಾಜಿ ಸಚಿವ ಶಾಹಿದ್ ಮಂಜೂರ್ ಅವರ ಪುತ್ರ ನವಾಜಿಶ್ ಶಾಹಿದ್‌ನನ್ನು ಮೀರತ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬAಧಿಸಿದAತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರ ಪೈಕಿ ನವಾಜಿಶ್ ಶಾಹಿದ್ ಸಹ ಒಬ್ಬರಾಗಿದ್ದು, ಮೊಹಮ್ಮದ್ ತಾರಿಕ್ ಮತ್ತು ಫಹಾದ್ ಯಜ್ದಾನಿ ಇತರ ಇಬ್ಬರು ಆರೋಪಿಗಳಾಗಿದ್ದಾರೆ. ನವಾಜಿಶ್ ಶಾಹಿದ್, ಯಜ್ದಾನ್ ಬಿಲ್ಡರ್ಸ್ ನಿರ್ಮಿಸಿದ ಕಟ್ಟಡದ ಜಮೀನಿನ ಮಾಲೀಕ ಎಂದು ಆರೋಪಿಸಲಾಗಿದೆ. ಶಾಹಿದ್ ಮಂಜೂರ್ ಅವರು ಪಶ್ಚಿಮ ಉತ್ತರ ಪ್ರದೇಶದಲ್ಲಿ ಹಿರಿಯ ಎಸ್‌ಪಿ ನಾಯಕರಾಗಿದ್ದು, ಪ್ರಸ್ತುತ ವಿಧಾನಸಭೆಯಲ್ಲಿ ಕಿಥೋರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.