ಮಡಿಕೇರಿ, ಜ. ೨೫: ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆಸುತ್ತಿರುವ ಬಾಲಕ, ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ೨೦೨೩-೨೪ನೇ ಸಾಲಿಗೆ ಫೆಬ್ರವರಿ ೮ ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಫೆಬ್ರವರಿ ೯ ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಫೆಬ್ರವರಿ ೧೦ ರಂದು ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಹಾಕಿ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೯೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಹಾಕಿ ಕ್ರೀಡಾ ಪಟುಗಳ ಆಯ್ಕೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ ೨೦೨೩-೨೪ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯನ್ನು ತಾಲೂಕು ಮಟ್ಟದಲ್ಲಿ ಫೆಬ್ರವರಿ ೮ ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಫೆಬ್ರವರಿ ೯ ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಹಾಗೂ ಫೆಬ್ರವರಿ ೧೦ ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಆಯ್ಕೆ ನಡೆಯಲಿದೆ.
೨೦೨೩ ರ ಜೂನ್ ೧ ಕ್ಕೆ ೧೧ ವರ್ಷದೊಳಗಿರಬೇಕು. ೨೦೧೨ ರ ನಂತರ ಹುಟ್ಟಿದವರಾಗಿರಬೇಕು. ೫ನೇ ತರಗತಿಗೆ ಮಾತ್ರ ಪ್ರವೇಶ ನೀಡಲಾಗುವುದು. ೧೪೦ ಸೆಂ.ಮೀ. ಎತ್ತರವಿರಬೇಕು. ಆಯ್ಕೆಯಲ್ಲಿ ಭಾಗವಹಿಸಲು ಬರುವ ಕ್ರೀಡಾಪಟುಗಳು ೪ನೇ ತರಗತಿಯಲ್ಲಿ ಓದುತ್ತಿರುವ ದೃಢೀಕರಣ ಪತ್ರ ಶಾಲೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಕಡ್ಡಾಯವಾಗಿ ತರಬೇಕು. ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ದೈಹಿಕ ಸಾಮರ್ಥ್ಯದ ಬಗ್ಗೆ ಸರ್ಕಾರಿ ವೈದ್ಯರಿಂದ ವೈದ್ಯಕೀಯ ದೃಢೀಕರಣ ಪತ್ರ ಕಡ್ಡಾಯ ತರಬೇಕು.
ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೯೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.