ಕುಶಾಲನಗರ, ಜ. ೨೫: ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೭೪ನೇ ಗಣರಾಜ್ಯೋತ್ಸವ ಸಮಾರಂಭ ತಾ. ೨೬ ರಂದು ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಹಿನ್ನೆಲೆ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಪಥಸಂಚಲನದಲ್ಲಿ ಪಾಲ್ಗೊಳ್ಳುವ ತಂಡಗಳ ತಾಲೀಮು ನಡೆಸಲಾಯಿತು. ಅಂದು ಬೆಳಿಗ್ಗೆ ೯.೩೦ಕ್ಕೆ ತಾಲೂಕು ತಹಶೀಲ್ದಾರ್ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಎಂ. ಪ್ರಕಾಶ್ ಅವರು ಧ್ವಜಾರೋಹಣ ನೆರವೇರಿಸುವರು.