ಗುಡ್ಡೆಹೊಸೂರು, ಜ. ೨೫: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷದ ಸಭೆಯು ಇಲ್ಲಿನ ಸಮುದಾಯ ಭವನದಲ್ಲಿ ನಡೆಯಿತು. ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಶಾಸಕ ಅಪ್ಪಚ್ಚು ರಂಜನ್ ಅವರು ಸಭೆಯಲ್ಲಿ ಹಾಜರಿದ್ದು, ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು. ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪಂಚಾಯಿತಿ ವ್ಯಾಪ್ತಿಯ ಪಕ್ಷದ ಸದಸ್ಯರು ಹಾಜರಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಹಾಜರಿದ್ದು ರಾಜ್ಯ ಮತ್ತು ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ಮತ್ತು ಭೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಭೂತ್ ಅಧ್ಯಕ್ಷರಿಗೆ ಮತ್ತು ಶಕ್ತಿ ಕೇಂದ್ರದ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಪಕ್ಷದ ರಾಜ್ಯ ಸಂಚಾಲಕ ಮಹೇಶ್ ತಿಮ್ಮಯ್ಯ ಹಾಜರಿದ್ದು ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿವರಿಸಿದರು. ಈ ಸಂದರ್ಭ ಪಕ್ಷದ ತಾಲೂಕು ಮಾಜಿ ಅಧ್ಯಕ್ಷ ಕುಮಾರಪ್ಪ, ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಪಕ್ಷದ ವಕ್ತಾರೆ ಇಂದಿರಾರಮೇಶ್, ಜಿಲ್ಲಾ ಕಾರ್ಯದರ್ಶಿ ಪುಷ್ಪ ನಾಗೇಶ್, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಕುಡೆಕಲ್ ನಿತ್ಯಾನಂದ ಪ್ರವೀಣ್ ಮತ್ತು ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು ಮತ್ತು ಸದಸ್ಯರು ಹಾಜರಿದ್ದರು.