ಪೊನ್ನAಪೇಟೆ, ಜ. ೨೪ : ಪೊನ್ನಂಪೇಟೆ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಹೆಚ್.ಡಿ. ಮಂಜು ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಸುಂಟಿಕೊಪ್ಪ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜು ಅವರು ಪೊನ್ನಂಪೇಟೆ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಸಿ. ಸುಬ್ರಮಣಿ ಅವರಿಂದ ಇಂದು ಅಧಿಕಾರ ಸ್ವೀಕರಿಸಿದರು. ಸುಬ್ರಮಣಿ ಅವರು ಅಪರಾಧ ವಿಭಾಗದ ಠಾಣಾಧಿಕಾರಿಯಾಗಿ ಮುಂದುವರೆಯಲಿದ್ದಾರೆ.