ಮಡಿಕೇರಿ, ಜ. ೨೪: ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಟ್ಲು ಗ್ರಾಮದಲ್ಲಿ ಈ ಸಂಜೆ ಕಾಣಿಸಿಕೊಂಡ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿಗಳು ಬೊಬ್ಬೆ ಹೊಡೆದು ಪಟಾಕಿ ಸಿಡಿಸಿ ಕಾಡಾನೆಯನ್ನು ಹಿಮ್ಮೆಟ್ಟಿಸಿದರು. ವಾರದ ಹಿಂದೆ ಇಲ್ಲಿ ಹುಲಿ ಕಾಣಿಸಿಕೊಂಡಿದೆ. ಎನ್.ಕೆ. ಮೇದಮ್ಮಯ್ಯ ಎಂಬವರ ಹಸುವನ್ನು ಹುಲಿ ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.