ಸೋಮವಾರಪೇಟೆ, ಜ. ೨೪: ರಾಷ್ಟಿçÃಯ ಹಬ್ಬಗಳ ಆಚರಣೆಯ ಸಮಯದಲ್ಲಿ ರಾಷ್ಟçಧ್ವಜಕ್ಕೆ ಅಪಮಾನವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಮತ್ತು ಕೇಂದ್ರ ಸರ್ಕಾರದ ಪ್ಲಾಸ್ಟಿಕ್ ನಿಷೇಧದ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್ ಅವರಿಗೆ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು, ರಾಷ್ಟçಧ್ವಜಕ್ಕೆ ಅಪಮಾನ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ರಾಷ್ಟಿçÃಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸಿ, ತ್ಯಾಜ್ಯದ ರಾಶಿ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುವುದರಿಂದ ಧ್ವಜಕ್ಕೆ ಅಪಮಾನವಾಗುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟçಧ್ವಜದ ಅಪವಿತ್ರತೆಯನ್ನು ತಡೆಯಲು ಸರ್ಕಾರ ಕಾರ್ಯಕಾರಿ ಸಮಿತಿ ರಚಿಸಬೇಕು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟçಧ್ವಜ ತಯಾರಿಸಿ ಮಾರಾಟ ಮಾಡುವುದು ಮತ್ತು ಬಳಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಜನರಲ್ಲಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದಾಗಬೇಕೆAದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ಕೆ.ಎನ್. ತೇಜಸ್ವಿ, ರಾಜೇಶ್, ಶಂಕರ್, ಪತಂಜಲಿ ಯೋಗ ಶಿಬಿರದ ಬಿ.ಎಂ. ಪ್ರದೀಪ್, ತಾಕೇರಿ ವೆಂಕಟೇಶ್, ಜಯಪ್ರಕಾಶ್ ಇದ್ದರು.