ಮುಳ್ಳೂರು, ಜ. ೨೫: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜೊತೆ ಯಲ್ಲಿ ಧಾರ್ಮಿಕ ತಳಹದಿಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾದೀಶ ಸದಾಶಿವ ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಅವರು ಶನಿವಾರಸಂತೆ ತ್ಯಾಗರಾಜ ಕಾಲೋನಿಯ ಶ್ರೀ ವಿಜಯ ವಿನಾಯಕ ದೇವಸ್ಥಾನ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸೋಮವಾರ ಪೇಟೆ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಡ್ಲಿಪೇಟೆ ಹಾಗೂ ಶನಿವಾರಸಂತೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಧನಾ ಸಮಾವೇಶದಲ್ಲಿ ಆಶೀರ್ವಚಿಸುತ್ತಿದ್ದರು. ಮಹಿಳೆಯರು ಆತ್ಮಸ್ಥೆöÊರ್ಯೆ, ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದೆಂಬ ಮೂಲ ಉದ್ದೇಶ ಇಟ್ಟುಕೊಂಡು ಗ್ರಾ,ಮಾಭಿವೃದ್ಧಿ ಯೋಜನೆಯನ್ನು ಸ್ಥಾಪಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಕನಸು ಇಂದು ನನಸಾಗಿದೆ ಎಂದರು.

ಧರ್ಮಸ್ಥಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್. ಅನಿಲ್‌ಕುಮಾರ್ ಮಾತನಾಡಿ, ಗ್ರಾಮೀಣ ಮಹಿಳೆಯರ ಆರ್ಥಿಕ ಸದೃಢತೆ, ಆರ್ಥಿಕ ಸಸ್ತೀಕರಣ ಗ್ರಾಮಾಭಿವೃದ್ಧಿ ಪರಿಕಲ್ಪನೆಯಲ್ಲಿ ನಾಲ್ಕು ದಶಕಗಳ ಹಿಂದೆ ಸ್ಥಾಪಿಸಿದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮೂಲ ಉದ್ದೇಶ ಸಂಸ್ಥೆಯ ಹಲವಾರು ಕಾರ್ಯಕ್ರಮಗಳ ಮೂಲಕವಾಗಿ ಇಂದು ಗ್ರಾಮೀಣ ಪ್ರದೇಶದಲ್ಲಿ ಶೇ. ೭೫ ರಷ್ಟು ಪ್ರಗತಿ ಸಾಧಿಸುತ್ತಿದೆ ಎಂದರು. ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಸರಕಾರ ರೂಪಿಸುತ್ತಿರುವ ಯೋಜನೆಗಳಷ್ಟೆ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಾಡುತ್ತಿದ್ದು, ಈ ಮೂಲಕ ಗ್ರಾಮೀಣ ಭಾಗದ ಮಹಿಳೆಯರು ಯೋಜನೆ ಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಸದೃಢರಾಗುತ್ತಿರುವುದು ಶ್ಲಾಘನಿಯ ಎಂದರು. ಸಮಾರಂಭದಲ್ಲಿ ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಮುಖ ರಾದ ಎಸ್.ಸಿ. ಶರತ್‌ಶೇಖರ್, ಭಗವಾನ್, ಎಸ್.ಎಸ್. ರಘು, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಕಿರಣ್, ಸರ್ದಾರ್ ಅಹಮ್ಮದ್, ಎಸ್.ಟಿ. ಮೋಹನ್, ಎಸ್.ಆರ್. ಮಧು, ಬಿ.ಬಿ. ನಾಗರಾಜ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಹಾಜರಿದ್ದರು.