ಕೂಡಿಗೆ, ಜ. ೨೬: ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಮುಖರು ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದರು. ಮುಳ್ಳುಸೋಗೆ ಗ್ರಾಮದ ಗೌರಿ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜು ಚಾಲನೆ ನೀಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರಳಿ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ನೀಡಲಾಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖ್ ಸುನಿಲ್, ರಾಜ್ಯ ಪರಿಶಿಷ್ಟ ಪಂಗಡ ಕಾರ್ಯದರ್ಶಿ ಮಂಜುಳ, ಪಂಚಾಯಿತಿ ಸದಸ್ಯರಾದ ಗಣೇಶ್, ವೇದಾವತಿ, ಆಸಿಫ್, ನಿಕಟ ಪೂರ್ವ ಶಕ್ತಿ ಕೇಂದ್ರದ ಪ್ರಮುಖ್ ಸೆಟ್ಟೆಜನ ಗಣಪತಿ, ಮಾಜಿ ಶಕ್ತಿ ಕೇಂದ್ರದ ಪ್ರಮುಖ್ ತಮ್ಮಯ್ಯ, ಬೂತ್ ಅಧ್ಯಕ್ಷ ಸಂದೀಪ್ ಕುಮಾರ್, ಪ್ರಮುಖರಾದ ಸುಚಿತ್ರಾ, ಪ್ರಭಾರಿಗಳಾದ ಕೆ. ವರದ, ವಾಂಚೀರ ಮನು ನಂಜುAಡ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.