ಸೋಮವಾರಪೇಟೆ, ಜ. ೨೭: ಪ್ರಕರಣವೊಂದಕ್ಕೆ ಸಂಬAಧಿಸಿದAತೆ ವಿಚಾರಣೆ ನಡೆಸಿದ ನಂತರ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರಿಗೆ ೨೦೨೦ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಅಥಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಗೋಪಾಲಕೃಷ್ಣ ಅವರು ಕ್ನನಡದಲ್ಲಿಯೇ ತೀರ್ಪು ಪ್ರಕಟಿಸಿ ಮೆಚ್ಚುಗೆ ಗಳಿಸಿದ್ದರು. ಈ ಹಿನ್ನೆಲೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು, ಕೋವಿಡ್‌ನಿಂದಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಮೊನ್ನೆ ದಿನ ಹೈಕೋರ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ಕುಮಾರ್, ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ನರೇಂದರ್ ಅವರುಗಳು ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ಮಾಡಿದರು.