ಕರಿಕೆ, ಜ. ೨೬: ಇಲ್ಲಿಗೆ ಸಮೀಪ ಎಳ್ಳುಕೊಚ್ಚಿ ಸರಕಾರಿ ಪ್ರೌಢ ಶಾಲೆಯಲ್ಲಿ ಎರಡು ದಿನಗಳ ಕಾಲ ಕಲಿಕಾ ಹಬ್ಬವನ್ನು ಆಚರಿಸಲಾಯಿತು. ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಆವರಣದಿಂದ ವಿದ್ಯಾರ್ಥಿಗಳು ಪ್ರೌಢಶಾಲಾ ಸಭಾಂಗಣಕ್ಕೆ ಮೆರವಣಿಗೆ ಮೂಲಕ ತೆರಳಿದರು.

ನಂತರ ನಡೆದ ಸಭೆಯನ್ನು ಸ್ಥಳೀಯ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಜಗದೀಶ್ ಉದ್ಘಾಟಿಸಿದರು. ಇಂತಹ ಚಟುವಟಿಕೆಗಳಿಂದ ಮಕ್ಕಳ ಪ್ರತಿಭೆ ಹೊರತರಲು ಸಾಧ್ಯವಾಗುತ್ತದೆ ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷÀ ಬಾಲಚಂದ್ರ ನಾಯರ್ ಗಡಿ ಗ್ರಾಮದಲ್ಲಿ ಸರಕಾರಿ ಶಾಲೆ ಯಶಸ್ವಿಯಾಗಿ ನಡೆಯುತ್ತಿದ್ದು, ಕಲಿಕಾ ಹಬ್ಬಕ್ಕೆ ಪಂಚಾಯಿತಿ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದರು.

ಸಿ.ಆರ್.ಪಿ. ಉಷಾ ಅವರು ಶಿಕ್ಷಣಾ ಇಲಾಖೆಯ ವತಿಯಿಂದ ಕಲಿಕಾ ಹಬ್ಬದ ಆಯೋಜನೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪ್ರಮುಖರಾದ ರಾಜ್ಯ ಕಲಿಕಾ ಹಬ್ಬದ ಸಂಪನ್ಮೂಲ ವ್ಯಕ್ತಿ ಕುಮಾರ ಸ್ವಾಮಿ ಟಿ.ವಿ., ಪ್ರೌಢ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಿವಾಸ, ಎಳ್ಳು ಕೊಚ್ಚಿ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಜಯಪ್ರಕಾಶ್, ಕರಿಕೆ ಕಾಲೋನಿ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣ , ಪಂಚಾಯಿತಿ ಸದಸ್ಯರು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಪೋಷಕರು ಹಾಜರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಅಶೋಕ್ ನಿರೂಪಿಸಿ, ಪ್ರೌಢ ಶಾಲಾ ಶಿಕ್ಷಕ ಪ್ರಮೋದ್ ಸ್ವಾಗತಿಸಿ, ವಂದಿಸಿದರು.