ಗೋಣಿಕೊಪ್ಪ ವರದಿ, ಜ. ೨೬: ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಸರ್ಕಾರಿ ಪ್ರಾಥಮಿಕ ಮತ್ತು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ಲಸ್ಟರ್ ಹಂತದ ಕಲಿಕಾ ಹಬ್ಬ ಎಂ.ಎA. ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಎರಡು ದಿನ ನಡೆದ ಹಬ್ಬದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಹಾಡು ಆಡಿ, ಕಾಗದ ಕತ್ತರಿ, ಊರು ತಿಳಿಯೋಣ, ಮಾಡು ಆಡಿ ಗುಂಪುಗಳಲ್ಲಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದರು.

೧೨೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಂ.ಎA. ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮರಿದೇವರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಥಮಿಕ ವಿಭಾಗದಿಂದ ಎ.ಕೆ. ರವೀಶ್, ಇ.ಎಸ್. ಸುಜಾತ, ಎಲಿಜಬೆತ್ ಅರಾನ, ಪ್ರೌಢಶಾಲಾ ವಿಭಾಗದಿಂದ ಚಂದನ್ ಕುಮಾರ್, ಕವಿತಾ, ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷೆ ಸರಿತಾ ಇದ್ದರು. ಟಿ. ಶೆಟ್ಟಿಗೇರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅನಿತಾ ಸಂಘಟಕರಾಗಿ ಕಾರ್ಯನಿರ್ವಹಿಸಿದರು.