ಸೋಮವಾರಪೇಟೆ, ಜ. ೨೬: ಸಮೀಪದ ಯಡೂರು ಬಿ.ಟಿ.ಸಿ.ಜಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಹಾಗೂ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಯತ್ತ ಗಮನ ಹರಿಸಿರುವ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು, ಕಾಲೇಜಿನ ಅಭಿವೃದ್ಧಿಯತ್ತ ಗಮನ ಹರಿಸಿದ್ದಾರೆ.
ಕಾಲೇಜು ಸಭಾಂಗಣದಲ್ಲಿ ಅಭಿವೃದ್ಧಿ ಸಮಿತಿ ಸಭೆ ನಡೆಸಿದ ಶಾಸಕರು ಹಲವಷ್ಟು ಸುಧಾರಣಾ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಕಾಲೇಜಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ನೂತನವಾಗಿ ಬಿ.ಸಿ.ಎ., ಹೋಟೆಲ್ ಮ್ಯಾನೇಜ್ಮೆಂಟ್ ಹಾಗೂ ಪ್ರವಾಸೋದ್ಯಮ ವಿಷಯಗಳಿಗೆ ಸಂಬAಧಿಸಿದAತೆ ಕೋರ್ಸ್ಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.
ಇದಕ್ಕಾಗಿ ಪೋಷಕರು, ಸಾರ್ವಜನಿಕರು ಹಾಗೂ ಕಾಲೇಜಿನ ಉಪನ್ಯಾಸಕರು ಕೈ ಜೋಡಿಸುವಂತೆ ಶಾಸಕರು ಮನವಿ ಮಾಡಿದ್ದು, ನ್ಯಾಕ್ಗೆ ಸಂಬAಧಿಸಿದAತೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುವಂತೆ ಸಿಬ್ಬಂದಿ ವರ್ಗಕ್ಕೆ ಸೂಚನೆ ನೀಡಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕಾಲೇಜು ಅಭಿವೃಧ್ಧಿ ಸಮಿತಿ ಶ್ರಮವಹಿಸಲಿದ್ದು, ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳು, ನುರಿತ ಉಪನ್ಯಾಸಕರನ್ನು ವ್ಯವಸ್ಥೆ ವiಡಲಾಗುತ್ತದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇದೇ ಸಂದರ್ಭ ನೂತನ ಆಡಳಿತ ಮಂಡಳಿಯನ್ನು ರಚಿಸಿದ ಶಾಸಕರು, ಉಪಾಧ್ಯಕ್ಷರಾಗಿ ಎಸ್. ಮಹೇಶ್, ಕಾರ್ಯಾಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲರನ್ನು ನೇಮಕ ಮಾಡಿದ್ದಾರೆ. ಉಳಿದಂತೆ ಸಮಿತಿಗೆ ಸದಸ್ಯರುಗಳಾಗಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ತಾಕೇರಿ ಗ್ರಾಮದ ಎಂ.ಪಿ.ಗೋಪಾಲ್, ಸೋಮವಾರಪೇಟೆಯ ಜೆ.ಸಿ.ಶೇಖರ್, ಪ್ರಸನ್ನ ನಾಯರ್, ಶರತ್, ಹಾನಗಲ್ಲು ಗ್ರಾಮದ ತಂಗಮ್ಮ, ಹರಗದ ಧರ್ಮಪ್ಪ, ಚೌಡ್ಲು ಮನುಕುಮಾರ್, ಯಡೂರಿನ ಭಾನುಪ್ರಕಾಶ್, ನೇಗಳ್ಳೆ ಜೀವನ್, ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿö್ಮÃ, ಪ್ರವೀಣ್, ಪ್ರಶಾಂತ್, ದಿವ್ಯ ಮೋಹನ್, ಪಿ.ಡಿ. ಪ್ರಕಾಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೂತನ ಸಮಿತಿಗೆ ನೇಮಕ ಮಾಡಲಾಗಿದೆ.
ತಾ. ೩೦ರಂದು ಸಭೆ: ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ತಾ. ೩೦ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಅಂದು ೧೧ ಗಂಟೆಗೆ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿದೆ.