ಸುಂಟಿಕೊಪ್ಪ, ಜ. ೨೬: ಸುಂಟಿಕೊಪ್ಪ ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರದ ವತಿಯಿಂದ ದ್ವಾರಕ ಹೊಟೇಲ್ ಸಭಾಂಗಣದಲ್ಲಿ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು.

ದ್ವಾರಕ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಬಿ.ಬಿ. ಭಾರತೀಶ್, ವಿಧಾನಸಭಾ ಕ್ಷೇತ್ರದ ಪ್ರಭಾರಿಗಳಾದ ವಿಕ್ರಂ, ಯುವ ಮೋರ್ಚಾ ಸಂಚಾಲಕ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ ಭಾಗವಹಿಸಿ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.