ಮಡಿಕೇರಿ, ಜ. ೨೬: ದೇಶದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಹಾಗೂ ಸುಧಾರಣೆ ತರಲಾಗುತ್ತಿದ್ದು, ರಾಜ್ಯದಲ್ಲಿ ಕೂಡ ಶಿಕ್ಷಣ ವ್ಯವಸ್ಥೆ ಬಲವರ್ಧನೆಗೊಂಡಿದೆ. ಹಲವು ಕಾರ್ಯಕ್ರಮದ ಮೂಲಕ ಸುಶಿಕ್ಷಿತ ಸಮಾಜ ರೂಪಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆ ಅಭಿಯಾನದಡಿ ಕೊಡಗು ಜಿಲ್ಲೆಯಲ್ಲಿ ಒಟ್ಟು ೭೩ ಸರ್ಕಾರಿ ಶಾಲೆಗಳ ಹೆಸರಿಗೆ ಖಾತೆ ಬದಲಾವಣೆ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆಯೂ ಕ್ರಮವಹಿಸಿ ಒಟ್ಟು ೧೫೬ ಅಂಗನವಾಡಿ ಕೇಂದ್ರಗಳ ಹೆಸರಿಗೆ ಖಾತೆ ವರ್ಗಾಹಿಸಲಾಗಿದೆ. ೨೦೨೨-೨೩ನೇ ಸಾಲಿನಲ್ಲಿ ಮಳೆಯಿಂದಾಗಿ ಹಾನಿಯಾದ ಅಂಗನವಾಡಿ ಕಟ್ಟಡ ದುರಸ್ತಿಗೆ ತಲಾ ರೂ. ೨ ಲಕ್ಷದಂತೆ ೩೮ ಅಂಗನವಾಡಿ ಕೇಂದ್ರಗಳಿಗೆ ರೂ. ೯೫ ಲಕ್ಷ ವೆಚ್ಚ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಈ ಸಂಬAಧ ಈಗಾಗಲೇ ರೂ. ೭೧.೨೫ ಲಕ್ಷ ಬಿಡುಗಡೆಗೊಳಿಸಲಾಗಿದೆ. ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮತ್ತು ಸುಧಾರಣೆ ತರಲಿರುವ ‘ರಾಷ್ಟಿçÃಯ ಶಿಕ್ಷಣ ನೀತಿ-೨೦೨೦’ನ್ನು ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

೧೫ ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಯಾಗಿರುವ ೧೩ ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಸೇವೆಗೆ ಸೇರ್ಪಡೆ ಗೊಳಿಸುವ ಗುರಿ ಹೊಂದಲಾಗಿದೆ. ವಿವೇಕ ಯೋಜನೆಯಡಿ ೬,೬೦೧ ಕೊಠಡಿಗಳು ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ಒಟ್ಟು ೯ ಸಾವಿರ ಕೊಠಡಿ ನಿರ್ಮಿಸಲಾಗುತ್ತಿದೆ. ಕೋವಿಡ್-೧೯ ಹಿನ್ನೆಲೆಯಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೂ ‘ಕಲಿಕಾ ಚೇತರಿಕೆ ೨.೦’ ರೂಪದಲ್ಲಿ ಅನುಷ್ಠಾನಗೊಳಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಹಲವು ವರ್ಷಗಳ ಬೇಡಿಕೆಯಾದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸರಳೀ ಕರಣಗೊಳಿಸಲಾಗಿದೆ. ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ಮಾಡಲಾಗಿದೆ.

(ಮೊದಲ ಪುಟದಿಂದ) ಮುಂಬರುವ ದಿನಗಳಲ್ಲಿ ಪ್ರೌಢಶಾಲೆಗಳಿಗೆ ೨,೫೦೦ ಶಿಕ್ಷಕರು ಹಾಗೂ ಹಾಗೂ ಪಿಯು ಕಾಲೇಜುಗಳಿಗೆ ೭೮೯ ಉಪನ್ಯಾಸಕರ ನೇಮಕ ಪ್ರಕ್ರಿಯೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಲ್ಲಿ ಅನೇಕ ಅಭಿವೃದ್ಧಿ ಮತ್ತು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಬಲಪಡಿಸಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನುಕೈಗೊಳ್ಳಲಾಗುತ್ತಿದೆ. ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ೧೬ ಶಾಲೆಗಳ ದುರಸ್ತಿ ಮತ್ತು ನವೀಕರಣಕ್ಕೆ ೧.೬೦ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಶಾಲಾ, ಕಾಲೇಜುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳನ್ನು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ್ನ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಹೇಳಿದರು.

ಮುಂದಿನ ೨೫ ವರ್ಷಗಳು ಭಾರತಕ್ಕೆ ‘ಅಮೃತ ಕಾಲ’. ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ನಾವೆಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿಯವರು ಕರೆ ನೀಡಿದ್ದು, ಇದಕ್ಕೆ ಕೈಜೋಡಿಸುವಂತೆ ಕೋರಿದರು.

ದೇಶದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿರುವ ಬೃಹತ್ ಯೋಜನೆ ‘ಗತಿ ಶಕ್ತಿ’ ಮೂಲಕ ನವ ಭಾರತ ನಿರ್ಮಾಣದ ಕಡೆ ದಾಪುಗಾಲು ಇಡಲಾಗುತ್ತಿದೆ. ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಯಾಗುತ್ತಿದೆ. ರೈಲು ಹಳಿಗಳ ಸಂಪೂರ್ಣ ವಿದ್ಯುದ್ದೀಕರಣ, ಜೋಡಿ ಮಾರ್ಗ, ವಂದೇ ಭಾರತ್ ಎಕ್ಸ್¬ಪ್ರೆಸ್ ರೈಲು, ಮೆಟ್ರೋ ರೈಲ್‌ಗಳು, ಬುಲೆಟ್ ರೈಲು, ರೈಲ್ವೆ ಫ್ರೈಟ್ ಕಾರಿಡಾರ್, ನೂತನ ವಿಮಾನ ನಿಲ್ದಾಣಗಳ ನಿರ್ಮಾಣ ಮತ್ತು ಉನ್ನತೀಕರಣ, ಎಕ್ಸ್-ಪ್ರೆಸ್ ವೇ ನಿರ್ಮಾಣ, ರಾಷ್ಟಿçÃಯ ಹೆದ್ದಾರಿಗಳ ಉನ್ನತೀಕರಣ, ಹೊಸ ಹೆದ್ದಾರಿಗಳ ನಿರ್ಮಾಣ ಮಾಡುವ ಮೂಲಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯಾಪಕ ಪ್ರಮಾಣದ ಬದಲಾವಣೆಯಾಗುತ್ತಿದೆ. ಸರ್ಕಾರದ ಇಂತಹ ದೂರದೃಷ್ಟಿಯ ಕ್ರಮಗಳಿಂದ ತ್ವರಿತ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣ ಸಾಧ್ಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಿನಿ ತಾರಾಲಯ - ವಿಜ್ಞಾನ ಕೇಂದ್ರ

ಕೊಡಗು ಜಿಲ್ಲೆಯ ೧೨ ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳೆAದು ಗುರುತಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲು, ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಅನುಷ್ಠಾನಗೊಳಿಸ ಲಾಗುತ್ತಿದೆ. ಕುಶಾಲನಗರದ ಚಿಕ್ಕ ಅಳುವಾರದಲ್ಲಿ ಪ್ರತ್ಯೇಕ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಅನುಮೋದನೆ ದೊರೆಕಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಭಿವೃದ್ಧಿಗೆ ಸಂಬAಧಿಸಿದAತೆ ರೂ. ೧೦೦ ಕೋಟಿ ವೆಚ್ಚದಲ್ಲಿ ೪೫೦ ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ.ರೂ. ೫ ಕೋಟಿ ವೆಚ್ಚದಲ್ಲಿ ಮಿನಿ ತಾರಾಲಯ ಮತ್ತು ೪ ಕೋಟಿ ವೆಚ್ಚದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ ಸಂಬAಧ ನಗರದ ಹೊರ ವಲಯದಲ್ಲಿ ಜಾಗ ಗುರುತಿಸಲಾಗಿದ್ದು, ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಗಾಂಧಿ ಮಂಟಪದಲ್ಲಿ ೩೦ ಸೆಂಟ್ ಜಾಗದಲ್ಲಿ ಮಹಾತ್ಮ ಗಾಂಧೀಜಿ ಉದ್ಯಾನವನ ನಿರ್ಮಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲಿಯೇ ಚಾಲನೆ ದೊರೆಯಲಿದೆ ಎಂದು ಹೇಳಿದರು.

ಮತ್ತೊಂದು ಗೋಶಾಲೆ

ರಾಜ್ಯ ಸರ್ಕಾರದಿಂದ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಗೆ ೧ ಕೋಟಿ ಅನುದಾನ ಬಿಡುಗಡೆ ಯಾಗಿದ್ದು, ಈಗಾಗಲೇ ಜಿಲ್ಲೆಯ ಕೆ. ನಿಡುಗಣೆ ಗ್ರಾಮದಲ್ಲಿ ಗೋಶಾಲೆ ಕಾರ್ಯನಿರ್ವಹಿಸುತ್ತಿದೆ. ಸೋಮವಾರಪೇಟೆ ತಾಲೂಕಿನ ನಾಗವಾರದಲ್ಲಿ ಮತ್ತೊಂದು ಗೋಶಾಲೆಯನ್ನು ಪ್ರಾರಂಭಿಸಲು ಜಾಗ ಗುರುತಿಸಲಾಗಿದೆ. ೨೦೨೨-೨೩ನೇ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ೮೦ ರಸ್ತೆ, ಸೇತುವೆ, ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನು ೧೧೪.೫೦ ಲಕ್ಷ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಕ್ರಿಯಾಯೋಜನೆ ಅನುಮೋದನೆಯಾಗಿದ್ದು, ೮೦ ಕಾಮಗಾರಿಗಳನ್ನು ಕೈಗೊಂಡು ತುರ್ತು ದುರಸ್ತಿ ಮಾಡಲಾಗಿದೆ. ರಾಜ್ಯ ವಲಯದಿಂದ ಮಳೆಯಿಂದ ಹಾನಿಗೊಳಗಾದ ೧೦೧ ರಸ್ತೆ, ಸೇತುವೆ, ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನು ರೂ. ೧,೨೧೦ ಲಕ್ಷ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ೧೧ ಕಾಮಗಾರಿ ಪೂರ್ಣಗೊಂಡಿದ್ದು, ೬೨ ಕಾಮಗಾರಿಗಳು ಪ್ರಗತಿಯಲ್ಲಿವೆ. ೨೭ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಒಂದು ಕಾಮಗಾರಿ ಅಂದಾಜು ಪಟ್ಟಿ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ರಾಣಿ ಮಾಚಯ್ಯಗೆ ಪದ್ಮಶ್ರೀ - ಸಂತಸ

ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ ಪದ್ಮಶ್ರೀ ದೊರೆತ ಬಗ್ಗೆ ಬಿ.ಸಿ. ನಾಗೇಶ್ ಸಂತಸ ವ್ಯಕ್ತಪಡಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಪದ್ಮ ಪ್ರಶಸ್ತಿಗೆ ಕೊಡಗಿನ ರಾಣಿ ಮಾಚಯ್ಯ ಅವರು ಸೇರಿದಂತೆ ರಾಜ್ಯದ ಎಂಟು ಸಾಧಕರು ಆಯ್ಕೆಯಾಗಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು.

ಈ ಸಂದರ್ಭ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್. ಮಹೇಶ್ ಇತರರು ಇದ್ದರು.