*ಗೋಣಿಕೊಪ್ಪ, ಜ. ೨೭: ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕ ಕೊಂಬಾರನ ಜಿ. ಬೋಪಯ್ಯ ಮತ್ತು ಕುಂತಿ ಬೋಪಯ್ಯ ಅವರು ಶಾಲು ಹಾಗೂ ಫಲಪುಷ್ಪಗಳನ್ನು ನೀಡಿ ಸನ್ಮಾನಿಸಿ, ಗೌರವಿಸಿದರು.
ಕೊಡಗಿನ ಪಾರಂಪಾರಿಕ ಉಮ್ಮತ್ತಾಟ್ ನೃತ್ಯವನ್ನು ಪ್ರಪಂಚಕ್ಕೆ ಪರಿಚಯಿಸುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ ೨೦೨೩ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಕೊಡಗಿನ ಹೆಮ್ಮೆ ಎಂದು ಶಾಸಕರು ಶ್ಲಾಘಿಸಿದರು.